ಸ್ವರ್ಣವಲ್ಲೀ ಶ್ರೀಗಳ ಮಾರ್ಗರ್ಶನದಲ್ಲಿ ನಡೆಯುತ್ತಿರುವ ಭಗವದ್ಗೀತಾ ಅಭಿಯಾನಕ್ಕೆ ಯಲ್ಲಾಪುರ ತಾಲೂಕಿನಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಭಗವದ್ಗೀತೆಯ ಬೆಳಕಿನಲ್ಲಿ ನಾವು ನಮ್ಮ ಜೀವನದಲ್ಲಿ ಧನ್ಯತೆ ಮತ್ತು ಸಾರ್ಥಕತೆಯನ್ನು ಕಾಣಬಹುದು. ಗೀತೆ ಎಂಬ ಗಂಗೆ ಎಲ್ಲೆಡೆ ಪ್ರವಹಿಸಲಿ ಎಂದು ಭಗವದ್ಗೀತಾ ಅಭಿಯಾನದ ತಾಲೂಕಾ ಅಧ್ಯಕ್ಷ ಜಿ.ಎನ್.ಭಟ್ ತಟ್ಟಿಗದ್ದೆ ಹೇಳಿದರು.

ಯಲ್ಲಾಪುರ ತಾಲೂಕಿನ ಬಿಸಗೋಡಿನಲ್ಲಿ ಭಗವದ್ಗೀತಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಯಲ್ಲಾಪುರ ತಾಲೂಕಿನಲ್ಲಿ 300ಕ್ಕೂ ಹೆಚ್ಚು ಸ್ಥಳಗಳಲ್ಲಿ ಭಗವದ್ಗೀತಾ ಅಭಿಯಾನ ನಡೆದಿದೆ. ಇನ್ನೂ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆಯುತ್ತದೆ. ಗೀತೆಯ ಮೂಲಕ ಭಗವಂತನ ಆರಾಧನೆಯ ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಬೇಕು. ನ.30ರಂದು ಶಿವಮೊಗ್ಗದಲ್ಲಿ ನಡೆಯಲಿರುವ ಅಭಿಯಾನದ ಮಹಾಸಮರ್ಪಣಾ ಸಮಾರಂಭದಲ್ಲಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಬೇಕು ಎಂದರು.

ಅಭಿಯಾನ ಸಮೀತಿಯ ಪ್ರಮುಖರಾದ ಲಕ್ಷ್ಮೀನಾರಾಯಣ ಗುಮ್ಮಾನಿ ಅಭಿಯಾನದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಅಭಿವೃದ್ಧಿ ಸಮೀತಿಯ ಅಧ್ಯಕ್ಷ ಗಣಪತಿ ಕರುಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕವಿತಾ ಕೃಷ್ಣಮೂರ್ತಿ ಭಗವದ್ಗೀತೆಯ 11 ನೆ ಅಧ್ಯಾಯವನ್ನು ಹೇಳಿಕೊಟ್ಟರು.

ಅಭಿಯಾನ ಸಮೀತಿಯ ಸಂಚಾಲಕ ಕೆ.ಜಿ.ಬೋಡೆ, ಪ್ರಮುಖರಾದ ಜಿ.ಎನ್.ಭಟ್ ತಟ್ಟಿಗದ್ದೆ, ಲಕ್ಷ್ಮೀನಾರಾಯಣ ಗುಮ್ಮಾನಿ ಹಾಗೂ ಮಾತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಬಾಸಲ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ

ಶಿರನಾಲೆ ಪ್ರಾಥಮಿಕ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ

ಕಂಚನಳ್ಳಿಯಲ್ಲಿ ಭಗವದ್ಗೀತಾ ಅಭಿಯಾನ

ಯಲ್ಲಾಪುರದ ಚೌಡೇಶ್ವರಿ ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading