ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಹೆಮ್ಮೆಯ ಕಾರ್ಯಕ್ರಮ : ಶಾಸಕ ಶಿವರಾಮ ಹೆಬ್ಬಾರ್
ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವು ಹೆಮ್ಮೆಯ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮವು ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆ ಒದಗಿಸುತ್ತಿವೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.
ಪಟ್ಟಣದ ವಾಯ್.ಟಿ.ಎಸ್.ಎಸ್. ಸಭಾಭವನದಲ್ಲಿ ಶನಿವಾರ ನಡೆದ ತಾಲೂಕಾ ಮಟ್ಟದ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಪಠ್ಯ ಚಟುವಟಿಕೆಗಳ ಜೊತೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಮುಖ್ಯವಾಗಿದ್ದು, ಇವುಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿವೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು ಯಶಸ್ವಿಯಾಗಿ ಆಯೋಜಿಸಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ವೇದಿಕೆಯಲ್ಲಿ ವಾಯ್.ಟಿ.ಎಸ್.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವಿ ಶಾನಭಾಗ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್ಟ, ಪ್ರಮುಖರಾದ ಪ್ರಕಾಶ ತಾರಿಕೊಪ್ಪ, ಅಜಯ ನಾಯ್ಕ, ಚಂದ್ರಶೇಖರ ಎಸ್.ಸಿ, ನಾರಾಯಣ ನಾಯಕ, ಆನಂದ ಹೆಗಡೆ, ಎಂ.ಕೆ.ಭಟ್, ಸಂಜೀವ ಹೊಸಕೇರಿ, ನಾರಾಯಣ ನಾವಡ, ಎನ್.ಎಸ್. ಭಟ್ಟ, ಸುಧಾಕರ ನಾಯ್ಕ, ಶೈಲಜಾ ಮಾಪ್ಸೇಕರ, ಸದಾನಂದ ನಾಯ್ಕ, ಸತೀಶ ನಾಯ್ಕ, ಸಂತೋಷ ಜಿಗಳೂರು ಮುಂತಾದವರು ಇದ್ದರು.