ಶಿವಮೊಗ್ಗದಲ್ಲಿ ನಡೆದ ಪ್ರಸಕ್ತ ಸಾಲಿನ ಭಗವದ್ಗೀತಾ ಅಭಿಯಾನದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ದೇಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಹರ್ಷ ಭಾವಿಮನೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ಈತನನ್ನು ತಾಲೂಕಾ ಭಗವದ್ಗೀತಾ ಅಭಿಯಾನ ಸಮೀತಿಯ ವತಿಯಿಂದ ಗೀತಾ ಜಯಂತಿಯ ಸುಸಂದರ್ಭದಲ್ಲಿ ಸೋಮವಾರ ಯಲ್ಲಾಪುರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಹರ್ಷನನ್ನು ಸನ್ಮಾನಿಸಿದ ತಾಲೂಕಾ ಭಗವದ್ಗೀತಾ ಅಭಿಯಾನ ಸಮೀತಿಯ ಅಧ್ಯಕ್ಷ ಜಿ.ಎನ್.ಭಟ್ ತಟ್ಟಿಗದ್ದೆ ಮಾತನಾಡಿ, ಕಿರಿಯ ವಯಸ್ಸಿನಲ್ಲಿ ಹಿರಿಯ ಸಾಧನೆ ಮಾಡಿದ ಹರ್ಷನು ಎಲ್ಲರಿಗೂ ಮಾದರಿ ಮತ್ತು ಪ್ರೇರಣೆಯಾಗಿದ್ದಾನೆ. ತಾಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಗಮನಾರ್ಹ ಸಾಧನೆ ಮಾಡಿ ಯಲ್ಲಾಪುರ ತಾಲೂಕಿಗೆ ಕೀರ್ತಿ ತಂದಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಸಾಧನೆ ಮಾಡಿದ ವಿದ್ಯಾರ್ಥಿಯನ್ನು ಅಭಿನಂದಿಸಲು ಬಹಳ ಸಂತಸವಾಗುತ್ತಿದೆ. ಇಂತಹ ಇನ್ನಷ್ಟು ಸಾಧನೆ ಮಾಡುವ ಅವಕಾಶವನ್ನು ಭಗವಂತನು ಅನುಗ್ರಹಿಸಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಭಿಯಾನ ಸಮಿತಿಯ ಪ್ರಮುಖರು ಮತ್ತು ವಿದ್ಯಾರ್ಥಿಯ ಪಾಲಕರು ಇದ್ದರು.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading