ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡುಬಂದ ಬೈಕ್, ಸವಾರನ ನಿಯಂತ್ರಣ ತಪ್ಪಿ ರಸ್ತೆಯ ತಿರುವಿನಲ್ಲಿ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಹಿಂಬದಿ ಕುಳಿತು ಪ್ರಯಾಣಿಸುತ್ತಿದ್ದ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಎಂ.ಬಿ.ಬಿ.ಎಸ್. ಕಲಿಯುತ್ತಿದ್ದ ಯುವಕರು ಪ್ರವಾಸಿ ತಾಣವಾದ ಉತ್ತರಕನ್ನಡ ಜಿಲ್ಲೆಯ ಯಾಣವನ್ನು ವೀಕ್ಷಿಸಲೆಂದು ಸ್ನೇಹಿತರೊಂದಿಗೆ ಬೈಕ್ ನಲ್ಲಿ ಹುಬ್ಬಳ್ಳಿ ಕಡೆಯಿಂದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಈ ಅವಘಡ ನಡೆದಿದೆ.

ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಸಿಂದಗಿಯ ರಾಜೀವ ಭೀಮಾಶಂಕರ ಚೌದರಿ ಎಂಬಾತ ತನ್ನ ಬೈಕಿನ ಹಿಂಬದಿಗೆ ವರ್ಧನ ವೆಂಕಟೇಶ ಶೆಟ್ಟಿ ಎಂಬಾತನನ್ನು ಕೂರಿಸಿಕೊಂಡು ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಬೈಕ್ ಚಲಾಯಿಸಿಕೊಂಡು ಬರುತ್ತಿರುವಾಗ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಗ್ರಾಮದ ಇಟ್ಟಿಗೆ ತಯಾರಿಕಾ ಘಟಕದ ಸಮೀಪದ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿದ್ದಿದೆ.

ಬೈಕ್ ರಸ್ತೆಗೆ ಬಿದ್ದ ರಭಸಕ್ಕೆ ಬೈಕ್ ಹಿಂಬದಿ ಕುಳಿತಿದ್ದ ಯಾದಗಿರಿಯ ವರ್ಧನ ವೆಂಕಟೇಶ ಶೆಟ್ಟಿ (19 ವರ್ಷ) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಅಪಘಾತದಲ್ಲಿ ಬೈಕ್ ಸವಾರನಿಗೂ ಗಂಭೀರವಾದ ಗಾಯವಾಗಿದೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading