ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ಇತ್ತೀಚೆಗೆ ಮುಸ್ಲಿಂ ಯುವಕನಿಂದ ಕೊಲೆಯಾದ ಮಹಿಳೆ ರಂಜಿತಾ ಬನ್ಸೋಡೆ ಮನೆಗೆ ಬಿಜೆಪಿಯ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ಸಿ ಗುರುವಾರ ಭೇಟಿ ನೀಡಿ, ರಂಜಿತಾ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಂಜಿತಾ ಕುಟುಂಬದ ದುಃಖದಲ್ಲಿ ನಾವೆಲ್ಲ ಜೊತೆಗಿರುತ್ತೇವೆ ಎಂದು ಧೈರ್ಯ ತುಂಬಿದರು. ಮೃತ ಮಹಿಳೆಯ ಮಗನಿಗೆ ಉತ್ತಮ ಶಿಕ್ಷಣ ನೀಡಿ, ಭವಿಷ್ಯ ರೂಪಿಸುವಂತೆ ಕುಟುಂಬಕ್ಕೆ ತಿಳಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಯಲ್ಲಾಪುರದ ರಂಜಿತಾ ಹತ್ಯೆ, ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಪೆÇಲೀಸರೇ ಹಲ್ಲೆಗೊಳಿಸಿದ ಘಟನೆ ಖಂಡನೀಯ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಂತಾರಾಮ, ಶಾರದಾ ನಾಯ್ಕ, ಗೀತಾ ಶಿಕಾರಿಪುರ, ದೇವಕ್ಕ ಕೆರೆಮನೆ, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ರೇಖಾ ಹೆಗಡೆ, ಶ್ರುತಿ ಹೆಗಡೆ, ಚಂದ್ರಕಲಾ ಭಟ್ಟ, ಶ್ಯಾಮಿಲಿ ಪಾಟಣಕರ್, ಕಲ್ಪನಾ ನಾಯ್ಕ ಮುಂತಾದವರು ಇದ್ದರು.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading