






ಯಶಸ್ವಿಯಾಗಿ ನಡೆದ ಆರ್ ಡಿಪಿಆರ್ ಕ್ರೀಡಾಕೂಟ

ನಮ್ಮ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಎನರ್ಜಿ ಹಾಗೂ ಉತ್ಸಾಹ ನಿರೀಕ್ಷಿತ ಮಟ್ಟಕ್ಕಿಂತ ಮೇಲಕ್ಕಿದೆ. ನಿಮ್ಮ ಕ್ರೀಡಾ ಹಾಗೂ ಸಾಂಸ್ಕೃತಿಕ ಪ್ರದರ್ಶನ ತುಂಬಾ ಖುಷಿ ನೀಡಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ದಿಲೀಷ್ ಶಶಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಶಿರಸಿ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಉತ್ತರ ಕನ್ನಡ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.
ಕ್ರೀಡಾಪಟುಗಳ ಆಸಕ್ತಿಯನ್ನು ವೀಕ್ಷಿಸಿದ ಅವರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ವಿವಿಧ ಪಂದ್ಯಾವಳಿಗಳನ್ನು ನಡೆಸಿ ಪ್ರೋತ್ಸಾಹಿಸುವುದಾಗಿ ತಿಳಿಸಿದರು. ಸಾಂಸ್ಕೃತಿಕ ಮತ್ತು ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಸಮಗ್ರ ವೀರಾಗ್ರಣಿ ಪ್ರಶಸ್ತಿಗೆ ಹೊನ್ನಾವರ ತಾಲೂಕು ಭಾಜನರಾದರೆ ಅಷ್ಟೇ ತೀವ್ರತರವಾದ ಪೈಪೋಟಿ ನೀಡಿ ದ್ವೀತಿಯ ಸ್ಥಾನಕ್ಕೆ ಸಿದ್ದಾಪುರ ತಾಲೂಕು ತೃಪ್ತಿಪಡಬೇಕಾಯಿತು

.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಆಡಳಿತ ವಿಭಾಗದ ಉಪ ಕಾರ್ಯದರ್ಶಿಗಳಾದ ಎಮ್ ಎಸ್ ಅಲ್ಲಾಭಕ್ಷ, ಜಿ.ಪಂ ಯೋಜನಾ ನಿರ್ದೇಶಕರಾದ ಕರೀಂ ಅಸಾದಿ, ಜಿ.ಪಂ ಅಭಿವೃದ್ಧಿ ವಿಭಾಗದ ಉಪಕಾರ್ಯದರ್ಶಿಗಳಾದ ಪ್ರಕಾಶ್ ಹಾಲಮ್ಮನವರ್, ಜಿ ಪಂ ಮುಖ್ಯ ಯೋಜನಾಧಿಕಾರಿಗಳಾದ ಸೋಮಶೇಖರ್ ಮೇಸ್ತ, ಜಿ. ಪಂ ಮುಖ್ಯ ಲೆಕ್ಕಧಿಕಾರಿಗಳಾದ ಆನಂದ್ ಹಬೀಬ್, ಕಾರ್ಯ ನಿರ್ವಾಹಕ ಅಭಿಯಂತರರು ಸತೀಶ್ ಜಹಾಗೀರ್ದಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಪಂಚಾಯತ್ ಎಪಿಒ ಜಿ. ಸತೀಶ್, ಸಹಾಯಕ ನಿರ್ದೇಶಕರಾದ ರವಿ ನಾಯ್ಕ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಗೂ ಸಂಬಂಧಿಸಿದ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮರಕ್ಕೆ ಢಿಕ್ಕಿಯಾದ ಖಾಸಗಿ ಬಸ್: ಪ್ರಯಾಣಿಕರಿಗೆ ಗಾಯ


ಯಲ್ಲಾಪುರ: ಮೈಸೂರಿನಿಂದ ದಾಂಡೇಲಿಗೆ ಬರುತ್ತಿದ್ದ ಖಾಸಗಿ ಬಸ್ಸು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಹೊಡೆದು, ನಂತರ ರಸ್ತೆ ಪಕ್ಕದ ಧರೆಗೆ ಗುದ್ದಿದ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಯಲ್ಲಾಪುರ ತಾಲೂಕಿನ ಬಾಳೆಗದ್ದೆ ಕ್ರಾಸ್ ಸಮೀಪ ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶನಿವಾರ ನಡೆದಿದೆ. ಘಟನೆಯಲ್ಲಿ ಬಸ್ಸಿನ ಮುಂಭಾಗ ಜಕಂಗೊಂಡಿದೆ.
ರಸ್ತೆ ಕಾಮಗಾರಿ ಸ್ಥಳ ಪರಿಶೀಲಿಸಿದ ಶಾಸಕ ಶಿವರಾಮ ಹೆಬ್ಬಾರ್


ಅಂದಾಜು 9.90 ಕೋಟಿ ರೂಪಾಯಿ ಅನುದಾನ ಮಂಜೂರಾಗಿರುವ ತಾಲೂಕಿನ ಹಿತ್ಲಕಾರಗದ್ದೆ-ನಂದೊಳ್ಳಿ ರಸ್ತೆ ಹಾಗೂ ನಂದೊಳ್ಳಿ-ಅಣಲಗಾರ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಸ್ಥಳವನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಪರಿಶೀಲನೆ ನಡೆಸಿದರು. ಕಾಮಗಾರಿಗಳ ಪ್ರಗತಿ ಹಾಗೂ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ನಂತರ ಹಿರಿಯರಾದ ರಾಮಕೃಷ್ಣ ಭಟ್ ಬಿದ್ರೆಪಾಲ್ ಅವರ ನಿವಾಸಕ್ಕೆ ಅನೌಪಚಾರಿಕವಾಗಿ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಅಣಲಗಾರ ಗ್ರಾಮದ ಗೋಪಾಲಕೃಷ್ಣ ದೇವಾಲಯಕ್ಕೆ 5 ಲಕ್ಷ ರೂಪಾಯಿ ವಿಶೇಷ ಅನುದಾನ ಮಂಜೂರಾಗಿರುವ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಗ್ರಾಮಸ್ಥರು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು.

ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ : https://bit.ly/e-yellapur_digital_news
E YELLAPUR -FACE BOOK PAGE FOLLOW ಮಾಡಿ – https://www.facebook.com/eyellapur
ನಮ್ಮ FACE BOOK GROUP JOIN ಆಗಿ https://www.facebook.com/groups/593852164946589
LATEST NEWS






















