ಯಲ್ಲಾಪುರ ತಾಲೂಕಿನ ಕಿರವತ್ತಿ-2 ಕ್ಲಸ್ಟರ್ ನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತೆಂಗಿನಗೇರಿಯಲ್ಲಿ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನವು ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಊರ ನಾಗರಿಕರು, ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಸದಸ್ಯೆ ಸಂಗೀತಾ ಪಾಟೀಲ್ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗೂ ಪಾಟೀಲ್ ಮಾತನಾಡಿ ಶಾಲೆಯ ಅಭಿವೃದ್ಧಿಗೆ ಎಲ್ಲ ರೀತಿಯಿಂದ ಸಹಕರಿಸುತ್ತಿರುವ ಊರ ನಾಗರಿಕರ ಸಹಾಯವನ್ನು ಸ್ಮರಿಸಿದರು.
ಶಾಲೆಯಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶಿಕ್ಷಣ ಇಲಾಖೆಯ ಕಿರವತ್ತಿ-2 ಕ್ಲಸ್ಟರ್ ನ ಸಿಆರ್ ಪಿ ನಾಗರಾಜ್ ನಾಯ್ಕ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯ ವಿಷಯಗಳಷ್ಟೇ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯವಾಗಿವೆ. ಮಕ್ಕಳಲ್ಲಿರುವ ಬಹುಮುಖ ಪ್ರತಿಭೆಗಳನ್ನು ಹೊರತರುವಲ್ಲಿ ಇಂತಹ ಸ್ನೇಹ ಸಮ್ಮೇಳನಗಳು ಸಹಕಾರಿಯಾಗಿವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಳಸೂರು ಶಾಲೆಯ ಮುಖ್ಯಾಧ್ಯಾಪಕ ಹರೀಶ್ ನಾಯಕ, ಕಣ್ಣಿಗೇರಿ ಶಾಲೆಯ ಮುಖ್ಯಾಧ್ಯಾಪಕ ಶ್ರೀಕಾಂತ ವೈದ್ಯ, ಬೈಲಂದೂರು ಗೌಳಿವಾಡ ಶಾಲೆಯ ಮುಖ್ಯಾಧ್ಯಾಪಕ ನಾರಾಯಣ ಕಾಂಬಳೆ, ತಾಲೂಕ ಸರಕಾರಿ ನೌಕರರ ಸಂಘದ ಸದಸ್ಯ ಸಂತೋಷ್ ನಾಯ್ಕ, ಶಿಕ್ಷಕ ಗಂಗಪ್ಪ ಲಮಾಣಿ ಕಾರ್ಯಕ್ರಮದ ಕುರಿತು ಮಾತನಾಡಿದರು.
ವೇದಿಕೆಯ ಮೇಲೆ ಶಾಲೆಯ ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಸೋನು ಕೊಕರೆ, ಯಲವಳ್ಳಿ ಶಾಲೆಯ ಮುಖ್ಯಾಧ್ಯಾಪಕ ಅಶೋಕ್ ಹರಿಜನ, ಗುಡಂದೂರು ಶಾಲೆಯ ಮುಖ್ಯಾಧ್ಯಾಪಕ ಉದಯ ದೇವಕಾರ್, ಸಾತನಕೊಪ್ಪ ಶಾಲೆಯ ಮುಖ್ಯಾಧ್ಯಾಪಕ ಹೇಮಂತ ದುರಂಧರ, ಸಾಮಾಜಿಕ ಕಾರ್ಯಕರ್ತಮಹೇಶ್ ಪೂಜಾರಿ ಉಪಸ್ಥಿತರಿದ್ದರು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ಎಲ್ಲ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲೆಯ ಮುಖ್ಯಾಧ್ಯಾಪಕ ಲಕ್ಷ್ಮಣ ಜಿ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಿಕ್ಷಕಿ ದೇವಕ್ಕ ಶಿಂಧೆ ವಂದಿಸಿದರು. ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಕಿ ಸವಿತಾ ಹಾಗೂ ಬಾಬು ಪಟಕಾರೆ ನಿರ್ವಹಿಸಿದರು.