ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಟ್ಯಾಂಕರ್ ಲಾರಿಗೆ ಬೆಂಕಿಹೊತ್ತಿಕೊಂಡು, ಟ್ಯಾಂಕರ್ ಲಾರಿಯು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ತಿರುವಿನಲ್ಲಿ ನಡೆದಿದೆ.

ಆರೋಪಿ ಚಾಲಕ ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿಯ ಶಿವಾನಂದ ತುಕಾರಾಮ ಬೀರಾದಾರ್ ಎಂಬಾತ ಇಥೆನಾಲ್ ತುಂಬಿದ ಟ್ಯಾಂಕರ್ ಲಾರಿಯನ್ನು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡುಹೋಗುತ್ತಿದ್ದಾಗ, ಅರಬೈಲ್ ಘಟ್ಟದ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಡಿವೈಡರ್ ಗೆ ಡಿಕ್ಕಿಯಾಗಿದೆ.

ಡಿಕ್ಕಿಯಾದ ರಭಸಕ್ಕೆ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಲಾರಿಯು ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಭೇಟಿನೀಡಿದ್ದರು.

ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading