ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಆಹಾರ ಮತ್ತು ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಮತ್ತು ಆಹಾರ ಸುರಕ್ಷತಾ ತರಬೇತಿ ಮತ್ತು ಪ್ರಮಾಣ ಪತ್ರ ಕೇಂದ್ರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಲ್ಲಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಆಹಾರ ಸುರಕ್ಷತಾ ತರಬೇತಿ ಮತ್ತು ಪ್ರಮಾಣ ಪತ್ರ ಕಾರ್ಯಕ್ರಮವು ಪಟ್ಟಣದ ತಾಲೂಕಾ ಆಸ್ಪತ್ರೆಯ ಸಭಾಭವನದಲ್ಲಿ ಶನಿವಾರ ನಡೆಯಿತು.
ಈ ಕಾರ್ಯಕ್ರಮವನ್ನು ರಾಜ್ಯ ಗ್ಲೋಬಲ್ ಇನ್ಸಿಟ್ಯೂಟ್ ಮತ್ತು ಆಹಾರ ಸುರಕ್ಷತಾ ತರಬೇತಿ ಮತ್ತು ಪ್ರಮಾಣ ಪತ್ರ ಕೇಂದ್ರದ ಮುಖ್ಯಸ್ಥ ರಾಘವೇಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ 2020 ರಿಂದ ಈ ತರಬೇತಿಯು ಕಡ್ಡಾಯವಾಗಿದೆ ಎಂದರು. ಹಾಗೂ ತರಬೇತಿಯ ಪ್ರಾಮುಖ್ಯತೆಯನ್ನು ತಿಳಿಸಿದರು.
ಯಲ್ಲಾಪುರ ತಾಲೂಕಿನ ಆರೋಗ್ಯ ಅಧಿಕಾರಿ ಹಾಗೂ ಆಹಾರ ಸುರಕ್ಷತಾ ಅಧಿಕಾರಿ ಡಾ. ನರೇಂದ್ರ ಪವಾರ ಆಹಾರ ಸುರಕ್ಷತಾ ತರಬೇತಿ ಮತ್ತು ಪ್ರಮಾಣ ಪತ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆಹಾರ ಸುರಕ್ಷತಾ ತರಬೇತಿ ಪ್ರಯೋಜನ ಪಡೆದು ಯಲ್ಲಾಪುರ ತಾಲೂಕಿನ ಎಲ್ಲಾ ಸಾರ್ವಜನಿಕರಿಗೆ ಗುಣಮಟ್ಟದ ಆಹಾರವನ್ನು ಪೂರೈಸುವದರ ಜೊತೆಗೆ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸಹಕರಿಸಬೇಕೆಂದು ತಿಳಿಸಿದರು.
ದೀಪಾ ಶಂಕರಿ ಅವರು ತರಬೇತಿ ನೀಡಿದರು. ಯಲ್ಲಾಪುರ ತಾಲೂಕಿನ ಒಟ್ಟೂ 121 ಆಹಾರ ಉದ್ಯಮಿದಾರರು ಮತ್ತು ಎಲ್ಲಾ ಹಾಸ್ಟೇಲಗಳ ಸಿಬ್ಬಂದಿಗಳು, ಇಲಾಖಾ ಸಿಬ್ಬಂದಿಗಳು ತರಬೇತಿ ಪಡೆದರು.