ಪ್ರಸ್ತುತ ಎಲ್ಲೆಡೆ ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವುದನ್ನು ಕಾಣುತ್ತೇವೆ. ಕೃಷಿ, ಆರೋಗ್ಯ, ಶಿಕ್ಷಣ ಮುಂತಾದ ಕ್ಷೇತ್ರಗಳಲ್ಲಿ ಹೊಸ,ಹೊಸ ತಂತ್ರಜ್ಞಾನಗಳ ಬಳಕೆಯಿಂದ ಹೆಚ್ಚಿನ ಅಭಿವೃದ್ಧಿ ಸಾಧ್ಯವಾಗುತ್ತಿದೆ. ಹಲವು ಆಧುನಿಕ ತಂತ್ರಜ್ಞಾನಗಳ ಬಳಕೆಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಅನೇಕ ಬದಲಾವಣೆ ಸಾಧ್ಯವಾಗಿದೆ. ತಂತ್ರಜ್ಞಾನಗಳ ಬಳಕೆಯು ಪ್ರಗತಿ ಮತ್ತು ಅಭಿವೃದ್ಧಿಯ ಸಂಕೇತವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರು ಹೇಳಿದರು.

ಅವರು ಮಂಗಳವಾರ ಯಲ್ಲಾಪುರ ಪಟ್ಟಣದ ಹೋಲಿ ರೋಜರಿ ಪ್ರೌಢಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿ, ತಂತ್ರಜ್ಞಾನಗಳ ಬಳಕೆಯಿಂದ ಶಿಕ್ಷಕರಿಗೆ ಪರಿಣಾಮಕಾರಿಯಾಗಿ ಬೋಧನೆ ಮಾಡಲು ಮತ್ತು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಿದೆ.

ಸ್ಮಾರ್ಟ್ ಕ್ಲಾಸ್ ನಂತಹ ತಂತ್ರಜ್ಞಾನದ ಬಳಕೆಯಿಂದ ವಿದ್ಯಾರ್ಥಿಗಳಲ್ಲಿ ಜ್ಞಾನ ವೃದ್ಧಿಯಾಗುತ್ತಿದೆ. ಉತ್ತಮ ಪರಿಕ್ಷಾ ಫಲಿತಾಂಶ ಪಡೆಯಲು ಸಹಕಾರಿಯಾಗಿದೆ ಎಂದ ಅವರು ಸ್ಮಾರ್ಟ್ ಕ್ಲಾಸ್ ಸೌಲಭ್ಯವನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವಂತಾಗಲಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜಯ ನಾಯಕ, ವಾಯ್.ಟಿ.ಎಸ್.ಎಸ್.ಕಾಲೇಜು ಪ್ರಾಂಶುಪಾಲ ಆನಂದ ಹೆಗಡೆ, ಹೋಲಿ ರೋಜರಿ ಪ್ರೌಢಶಾಲೆಯ ಮುಖ್ಯಾಧ್ಯಾಕ ಫಾ.ರೇಮಂಡ್ ಫರ್ನಾಂಡಿಸ್, ಶಿಕ್ಷಕ ಎಂ.ರಾಜಶೇಖರ .
ಉಪಸ್ಥಿತರಿದ್ದರು.

ಶಿಕ್ಷಕ ಚಂದ್ರಶೇಖರ ಎಸ್.ಸಿ ನಿರ್ವಹಿಸಿದರು. ಶಿಕ್ಷಕ ವೆಂಕಟ್ರಮಣ ಭಟ್ಟ ಸ್ವಾಗತಿಸಿದರು. ಶಿಕ್ಷಕ ನೆಲ್ಸನ್ ಗೋನ್ಸಾಲ್ವಿಸ್ ವಂದಿಸಿದರು

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading