ಹೋರಾಟದ ಮೂಲಕ ಗುರುತಿಸಿಕೊಂಡಿರುವ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆಯವರನ್ನು ಉತ್ತರಕನ್ನಡ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಪಕ್ಷನಿಷ್ಠೆ, ಕರ್ತವ್ಯ ಶ್ರದ್ಧೆ ಮತ್ತು ಸಂಘಟನಾ ಶಕ್ತಿ, ರೈತಪರ ಕಾಳಜಿಯನ್ನು ಗುರುತಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಗುರುವಾರ ಪ್ರತಿಕ್ರಯಿಸಿದ ಅನಂತಮೂರ್ತಿ ಹೆಗಡೆ ಮಾತನಾಡಿ, ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸದಾ ನನ್ನನ್ನು ಹುರಿದುಂಬಿಸಿ ಬೆಂಬಲಿಸುತ್ತಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ, ರಾಜ್ಯ ರೈತಮೋರ್ಚಾ ಅಧ್ಯಕ್ಷರಾದ ಎ.ಎಸ್.ಪಾಟೀಲ ನಡಹಳ್ಳಿ ಹಾಗೂ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ, ಮಾಜಿ ಸಚಿವರುಗಳಾದ ಸುನೀಲ್ ಕುಮಾರ ಕಾರ್ಕಳ, ಹರತಾಳು ಹಾಲಪ್ಪ, ಪಕ್ಷದ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್ ನಾಯ್ಕ. ಕುಮಟಾ ಶಾಸಕರಾದ ದಿನಕರ ಕೆ. ಶೆಟ್ಟಿ, ಮಾಜಿ ಶಾಸಕರುಗಳಾದ ಸುನೀಲ ನಾಯ್ಕ, ಸುನಿಲ್ ಹೆಗಡೆಯವರು, ರಾಜ್ಯ ಕಾರ್ಯಕಾರಿಣಿ ಸದಸ್ಯರಾಜ ಕೆ.ಜಿ.ನಾಯ್ಕ ಮತ್ತು ಪಕ್ಷದ ಜಿಲ್ಲೆಯ ಎಲ್ಲ ಪ್ರಧಾನ ಕಾರ್ಯದರ್ಶಿಗಳು, ನಿಕಟಪೂರ್ವ ಅಧ್ಯಕ್ಷರಾದ ರಮೇಶ ನಾಯ್ಕ ಕುಪ್ಪಳ್ಳಿ, ಜಿಲ್ಲಾ ಕೋರ್ ಕಮಿಟಿ ಸದಸ್ಯರು, ಎಲ್ಲಾ ಮಂಡಳಾಧ್ಯಕ್ಷರು, ಸಮಸ್ತ ಕಾರ್ಯಕರ್ತರು,ಹಿತೈಷಿಗಳು, ಆತ್ಮೀಯರಿಗೆ ಧನ್ಯವಾದಗಳನ್ನು ಸಮರ್ಪಿಸುತ್ತೇನೆ ಎಂದಿದ್ದಾರೆ.

ನಿರಂತರ ಹೋರಾಟದಿಂದ ಗುರುತಿಸಿಕೊಂಡ ನಾನು ಪಕ್ಷ ನೀಡಿದ ಹುದ್ದೆಗೆ ನ್ಯಾಯ ಒದಗಿಸುವುದರ ಜೊತೆಗೆ ಜಿಲ್ಲೆಯ ರೈತಪರ,ಪಕ್ಷದ ಕಾರ್ಯಕರ್ತರ ಪರ, ನೊಂದವರ ಪರ, ನ್ಯಾಯದ ಪರ ಧ್ವನಿಯಾಗಿ ಕೆಲಸ ಮಾಡುತ್ತೇನೆಂದು ಆಶ್ವಾಸನೆ ನೀಡುತ್ತೇನೆ: ಅನಂತಮೂರ್ತಿ ಹೆಗಡೆ ನೂತನ ಜಿಲ್ಲಾಧ್ಯಕ್ಷರು. ಬಿಜೆಪಿ ರೈತ ಮೋರ್ಚಾ ಉತ್ತರಕನ್ನಡ

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading