ಜೆ.ಇ.ಇ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಆರ್ಕಿಟೆಕ್ಚರ್ ವಿಭಾಗದಲ್ಲಿ ಕುಮಟಾ ಗೋರೆಯ ಕೆನರಾ ಎಕ್ಸಲೆನ್ಸ್ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ದಿಶಾ ಅಶೋಕ ಹೆಗಡೆ 99.27 ಪರ್ಸಂಟೈಲ್ ಮಾಡುವ ಮೂಲಕ ರಾಷ್ಟ್ರ ಮಟ್ಟದ ಸಾಧನೆಗೈದಿದ್ದಾಳೆ.

ದಿಶಾ ಹೆಗಡೆ ಮೂಲತಃ ಯಲ್ಲಾಪುರ ಪಟ್ಟಣದ ನಾಯಕನಕೆರೆ ದತ್ತ ಮಂದಿರದ ಅರ್ಚಕ ಅಶೋಕ ಹೆಗಡೆ ಹಾಗೂ ಶ್ರೀಮತಿ ಹೆಗಡೆ ದಂಪತಿಯ ಮಗಳಾಗಿದ್ದು ತನ್ನ ಎರಡು ವರ್ಷದ ಪಿ.ಯು ಶಿಕ್ಷಣವನ್ನು ಕುಮಟಾದ ಕೆನರಾ ಎಕ್ಸಲೆನ್ಸ್ ಕಾಲೇಜಿನಲ್ಲಿ ಮಾಡುತ್ತಿದ್ದು ಇವಳ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಜಿ.ಜಿ ಹೆಗಡೆ, ವಿಶ್ವಸ್ಥರಾದ ಡಿ. ಎನ್ ಭಟ್ಟ ಸೇರಿದಂತೆ ಎಲ್ಲಾ ಭೋಧಕ ಭೋಧಕೇತರ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.

ಜೆ.ಇ.ಇ ಪರೀಕ್ಷೆ ದೇಶದ ಪ್ರಮುಖ ಎಂಜಿನಿಯರಿಂಗ್ ಸಂಸ್ಥೆಗಳ ಪ್ರವೇಶಕ್ಕೆ ದಾರಿ ಮಾಡಿಕೊಡುವ ಅತ್ಯಂತ ಸ್ಪರ್ಧಾತ್ಮಕ ಪರೀಕ್ಷೆಯಾಗಿದೆ. ಇಂತಹ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದ ಸಾಧನೆ ಮಾಡಿರುವುದು ವಿದ್ಯಾರ್ಥಿನಿಯ ಪ್ರತಿಭೆ ಹಾಗೂ ಸಂಸ್ಥೆಯ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ದಿಶಾ ಹೆಗಡೆ ಅವರ ಈ ಸಾಧನೆ ಇತರೆ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದ್ದು, ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳಿಗೂ ರಾಷ್ಟ್ರಮಟ್ಟದ ಸಾಧನೆ ಸಾಧ್ಯವೆಂಬುದಕ್ಕೆ ಉತ್ತಮ ಉದಾಹರಣೆಯಾಗಿದೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading