ಯಲ್ಲಾಪುರ ಪಟ್ಟಣದ ಜೋಡುಕೆರೆಯಲ್ಲಿ ಶುಕ್ರವಾರ ಅಪರಿಚಿತ ವ್ಯಕ್ತಿಯ ಮೃತದೇಹ ಕಂಡುಬಂದಿದೆ. ವ್ಯಕ್ತಿಯು ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ವ್ಯಕ್ತಿಯು ಕಪ್ಪು ಬಣ್ಣದ ಚಕ್ಸ್ ಶರ್ಟ್, ಕಪ್ಪು ಬಣ್ಣದ ನೈಟ್ ಪ್ಯಾಂಟ್ ಹಾಕಿಕೊಂಡಿದ್ದು, 30 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಲಗೈ ಕೈ ಕಟ್ಟಿನ ಮೇಲೆ ಓಂ ಟ್ಯಾಟು , ಬಲಗೈ ಮೊಣಕಟ್ಟಿನ ಕೆಳಭಾಗದಲ್ಲಿ ಮೇಲೆ Mom Dad ಅಂತ ಟ್ಯಾಟು ಹಾಕಿಸಿಕೊಂಡಿದ್ದಾನೆ. ಈ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಕೂಡಲೇ ಯಲ್ಲಾಪುರ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಎಂದು ಪೊಲೀಸರು ವಿನಂತಿಸಿದ್ದಾರೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading