ಯಲ್ಲಾಪುರ ತಾಲೂಕಿನ ಆರು ಕೇಂದ್ರಗಳಲ್ಲಿ ಬುಧವಾರ ನಡೆದ ಎಸ್.ಎಸ್.ಎಲ್.ಸಿ. ಮೊದಲ ದಿನದ ಪರೀಕ್ಷೆಯು ಸುಸೂತ್ರವಾಗಿ ನಡೆದಿದಿದ್ದು, ಪರೀಕ್ಷೆಗೆ 16 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಪಟ್ಟಣದ ವಾಯ್.ಟಿ.ಎಸ್.ಎಸ್. ಸಂಯುಕ್ತ ಪದವಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಒಟ್ಟೂ 203 ವಿದ್ಯಾರ್ಥಿಗಳು ಹಾಜರಾಗಿದ್ದು, 4 ಗಂಡು, ಒಂದು ಹೆಣ್ಣು ಒಟ್ಟೂ 5 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಪಟ್ಟಣದ ಕಾಳಮ್ಮನಗರದ ಸರ್ಕಾರಿ ಪ್ರೌಢಶಾಲೆಯ ಕೇಂದ್ರದಲ್ಲಿ 198 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಈ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿನಿ ಗೈರಾಗಿದ್ದಾಳೆ.

ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಒಟ್ಟೂ 200 ವಿದ್ಯಾರ್ಥಿಗಳು ಹಾಜರಾಗಿದ್ದು, 2 ಗಂಡು ಮಕ್ಕಳು ಗೈರಾಗಿದ್ದಾರೆ. ಮಂಚಿಕೇರಿಯ ಶ್ರೀರಾಜರಾಜೇಶ್ವರಿ ಪ್ರೌಢಶಾಲಾ ಕೇಂದ್ರದಲ್ಲಿ 142 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2 ಗಂಡು, 3 ಹೆಣ್ಣು ಒಟ್ಟೂ 5 ವಿದ್ಯಾರ್ಥಿಗಳು ಗೈರಾಗಿದ್ದಾರೆ. ವಜ್ರಳ್ಳಿಯ ಸರ್ವೋದಯ ಪ್ರೌಢಶಾಲಾ ಕೇಂದ್ರದಲ್ಲಿ 97 ವಿದ್ಯಾರ್ಥಿಗಳು ಹಾಜರಾಗಿದ್ದು ಒಬ್ಬ ವಿದ್ಯಾರ್ಥಿ ಗೈರಾಗಿದ್ದಾನೆ. ಕಿರವತ್ತಿಯ ಪಬ್ಲಿಕ್ ಶಾಲೆಯ ಕೇಂದ್ರದಲ್ಲಿ 116 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಒಬ್ಬ ವಿದ್ಯಾರ್ಥಿ, ಒಬ್ಬ ವಿದ್ಯಾರ್ಥಿನಿ ಗೈರಾಗಿದ್ದಾರೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading