ಉತ್ತರ ಕನ್ನಡ ಜಿಲ್ಲೆಯ ಜೀವನಾಡಿಗಳಾದ ಬೇಡ್ತಿ (ಗಂಗಾವಳಿ), ಅಘನಾಶಿನಿ ಮತ್ತು ಶಾಲ್ಮಲಾ ನದಿಗಳ ತಿರುವು ಯೋಜನೆಯನ್ನು ವಿರೋಧಿಸಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಭಜನಾ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಿದರು.

ನಂತರ ಆಶೀರ್ವಚನ ನೀಡಿದ ಅವರು, ಆಧ್ಯಾತ್ಮಿಕ ಶಕ್ತಿಯ ಮೂಲಕ ನದಿ ಸಂರಕ್ಷಣೆಯ ಸಂಕಲ್ಪ ಮಾಡುವುದು ಇದರ ಉದ್ದೇಶ ಎಂದರು. ಯುಗಾದಿಯಿಂದ ರಾಮನವಮಿಯವರೆಗೆ ಒಂಬತ್ತು ದಿನಗಳ ಕಾಲ ಪಟ್ಟಣ ಹಾಗೂ ಗ್ರಾಮಗಳ ದೇವಸ್ಥಾನಗಳಲ್ಲಿ ಭಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ನದಿ ತಿರುವು ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ, ಪ್ರಧಾನ ಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರಿಗೆ ಪತ್ರ ಬರೆಯುವ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ.

ಇದೇ ಸಂದರ್ಭದಲ್ಲಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ಅಧಿಕೃತ ವೆಬ್‍ಸೈಟ್ ಭಗೀರಥ ಡಾಟ್ ಕಾಮ್ ಗೆ ಚಾಲನೆ ನೀಡಲಾಯಿತು.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading