ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ 8 ಜನರಿಗೆ ಗಾಯವಾದ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಗ್ರಾಮದ ಮಾರುತಿ ದೇವಾಲಯದ ಸಮೀಪ ನಡೆದಿದೆ.

ಆರೋಪಿ ಕಾರು ಚಾಲಕ ಧಾರವಾಡದ ಬಸವರಾಜ ಗದಿಗೆಪ್ಪ ಗೊಂದಿ ಎಂಬಾತ ತಾನು ಚಾಲನೆ ಮಾಡುತ್ತಿದ್ದ ಕಾರನ್ನು ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಯಲ್ಲಾಪುರ ತಾಲೂಕಿನ ಅರಬೈಲ ಮಾರುತಿ ದೇವಸ್ಥಾನ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಚಲಾಯಿಸಿಕೊಂಡು ಹೊರಟಿದ್ದ

ಸವದತ್ತಿಯ ಮಾರುತಿ ಬಾಬು ಕೋಲ್ಕಾರ್ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಮಾರುತಿ ಅವರ ಕಾರಿನಲ್ಲಿದ್ದ ಚಾಲಕ ದೊಡ್ಡಕರೇಪ್ಪ, ಸಾಬಪ್ಪ, ಸಾವಿತ್ರಿ, ಸುರೇಖಾ, ಗಂಧರ್ವ

ಹಾಗೂ ಇನ್ನೊಂದು ಕಾರಿನಲ್ಲಿದ್ದ ಸಹನಾ, ಅಶ್ವನಿ, ದೀಪ್ತಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಎರಡೂ ಕಾರುಗಳು ಜಖಂಗೊಂಡಿವೆ. ಈ ಕುರಿತು ಯಲ್ಲಾಪುರ
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

.

============================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading