ಸ್ವಯಂ ಗಣತಿ ಮಾಡಿಕೊಳ್ಳಲು ಅವಕಾಶ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಭಾರತೀಯ ಜನಗಣತಿ ಪ್ರಯುಕ್ತ ಮನೆಗಳ ಪಟ್ಟಿ ಮತ್ತು ಮನೆಗಳ ಗಣತಿ ಕಾರ್ಯವು ಏಪ್ರಿಲ್ 1 ರಿಂದ 15 ನೇ ಮೇ 2026 ರವರೆಗೆ ನಡೆಯಲಿದ್ದು, ಜನಗಣತಿ ಕಾರ್ಯಾಚರಣೆಗಳ ನಿರ್ದೇಶನಾಲಯ ಕರ್ನಾಟಕ ರವರು ಈ ಬಾರಿ ಸಾರ್ವಜನಿಕರಿಗೆ ಏಪ್ರಿಲ್ 1 ರಿಂದ 15 ರವರೆಗೆ ಸ್ವಯಂ ಗಣತಿ ಮಾಡಿಕೊಳ್ಳಲು ಅವಕಾಶವನ್ನು ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ
ಜಿಲ್ಲೆಯ ಎಲ್ಲ ಸಾರ್ವಜನಿಕರು ವೆಬ್ ಪೋರ್ಟಲ್ಮೂಲಕ ಸ್ವಯಂ ಗಣತಿ ಮಾಡಿಕೊಳ್ಳಬಹುದಾಗಿದ್ದು, ಕುಟುಂಬದ ಯಾವುದೇ ಒಬ್ಬ ಸದಸ್ಯರು ಸ್ವಯಂ ಗಣತಿ ಮಾಡಿ ಮನೆಯ ವಿವರಗಳನ್ನು ಒದಗಿಸಿ ಮೊಬೈಲ್ /ಇಮೇಲ್ ನಲ್ಲಿ ಸ್ವಯಂ ಗಣತಿ ಐಡಿಯನ್ನು ಪಡೆಯಬಹುದಾಗಿದೆ. ಗಣತಿದಾರರು ಮನೆಗೆ ಭೇಟಿ ನೀಡಿದಾಗ ದೃಢೀಕರಿಸಲು ಮತ್ತು ಸ್ವಯಂ ಗಣತಿ ತಂತ್ರಾಂಶದ ಅಂತಿಮ ಸಲ್ಲಿಕೆಗಾಗಿ ಸ್ವಯಂ ಗಣತಿ ಐಡಿಯನ್ನು ಅವರೊಂದಿಗೆ ಹಂಚಿಕೊಳ್ಳಬೇಕಾಗಿರುತ್ತದೆ.
ಆದ್ದರಿಂದ ಜಿಲ್ಲೆಯ ಸಾರ್ವಜನಿಕರು ಸ್ವಯಂ ಗಣತಿ ಕಾರ್ಯದಲ್ಲಿ ಪಾಲ್ಗೊಂಡು ನಿಖರವಾದ ಮಾಹಿತಿಯನ್ನು ಒದಗಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಸಾರ್ವಜನಿಕರು ನೀಡಿದ ಮಾಹಿತಿಯು ಸುರಕ್ಷಿತವಾಗಿ ಹಾಗೂ ಗೌಪ್ಯವಾಗಿ ಉಳಿಯುತ್ತದೆ. ಸದ್ರಿ ಮಾಹಿತಿಯನ್ನು ರಾಷ್ಟ್ರ ನಿರ್ಮಾಣಕ್ಕಾಗಿ ಮಾತ್ರ ಬಳಸಲಾಗುತ್ತದೆ ಎಂದು ಜಿಲ್ಲಾಧಿಕಾರಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.