ಗುರುವಾರ ಪ್ರಕಟಗೊಂಡ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ಯಲ್ಲಾಪುರ ಪಟ್ಟಣದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.

ಈ ಶಾಲೆಯು ನೂರಕ್ಕೆ ನೂರು ಫಲಿತಾಂಶ ದಾಖಲಿಸಿದೆ. ಈ ಶಾಲೆಯ 45 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದು ಇನ್ನುಳಿದ 22 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ.

ಈ ಶಾಲೆಯ ಸಹನಾ ನಾಗರಾಜ ಪೂಜಾರಿ 98. 40. ಅಂಕ ಪಡೆದು ತಾಲೂಕಿಗೆ ತೃತೀಯ ಸ್ಥಾನ ಪಡೆದಿದ್ದಾಳೆ.
ಪ್ರಗತಿ ರಾಘು ನಾಯ್ಕ 96.9 ಸಾನಿಕ ಮಡಿವಾಳ 95.8 ಸಾಧನೆ ಮಾಡಿದ್ದಾರೆ. ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಪ್ರಾಂಶುಪಾಲರಾದ ಸಂಜಯ ನಾಯಕ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

====================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading