ಯಲ್ಲಾಪುರ ಪಟ್ಟಣದಲ್ಲಿ ಗುರುವಾರ ಸಂಜೆ ಸುರಿದ ಮಳೆ, ರಭಸವಾಗಿ ಬೀಸಿದ ಗಾಳಿಯು ಹಲವು ಅವಾಂತರಗಳನ್ನು ಸೃಷ್ಟಿಸಿದೆ. ವಿವಿದೆಡೆ ವಿದ್ಯುತ್ ಕಂಬಗಳು ಮುರಿದುಬಿದ್ದಿವೆ.

ಪಟ್ಟಣದ ಉದ್ಯಮನಗರದಲ್ಲಿ ಆಟೋರಿಕ್ಷಾ ಮೇಲೆ ವಿದ್ಯುತ್ ಕಂಬ ಬಿದ್ದು ಆಟೋರಿಕ್ಷಾಕ್ಕೆ ಹಾನಿಯಾಗಿದೆ. ಕಾಳಮ್ಮನಗರದಲ್ಲಿ ಮನೆಯ ಮೇಲೆ ವಿದ್ಯುತ್ ಕಂಬ ಬಿದ್ದಿದೆ.

ಮುಂಡಗೋಡ ರಸ್ತೆಯಲ್ಲಿ ಹಾಗೂ ಲಿಂಗನಕೊಪ್ಪದಲ್ಲಿ ವಿದ್ಯುತ್ ಕಂಬ ಮುರಿದು ರಸ್ತೆಗೆ ಬಿದ್ದ ಘಟನೆ ನಡೆದಿದೆ. ಇದರಿಂದಾಗಿ ಮೂರ್ನಾಲ್ಕು ತಾಸು ವಿದ್ಯುತ್ ವ್ಯತ್ಯಯವಾಗಿತ್ತು.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ದಾವಿಸಿದ ಹೆಸ್ಕಾಂ ಸಿಬ್ಬಂದಿಗಳು ಬಹಳ ಪರಿಶ್ರಮದಿಂದ ವಿದ್ಯುತ್ ಮರುಸಂಪರ್ಕ ನೀಡಿದ್ದಾರೆ. ಹೆಸ್ಕಾಂ ಸಿಬ್ಬಂದಿಗಳ ಈ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಯಲ್ಲಾಪುರ ಪಟ್ಟಣದ ಗ್ರಾಮದೇವಿನಗರದಲ್ಲಿ ಹಲಸಿನ ಮರವೊಂದು ಮುರಿದು ರಸ್ತೆಗೆ ಬಿದ್ದ ಘಟನೆ ಗುರುವಾರ ಸಂಜೆ ನಡೆದಿದೆ.

============================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading