ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡುಹೋಗುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಅಂಚಿನ ಮರಕ್ಕೆ ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕಳೋರ್ವಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಯಲ್ಲಾಪುರ ತಾಲೂಕಿನ ಕಿರವತ್ತಿಯಲ್ಲಿ ನಡೆದಿದೆ.

ಆರೋಪಿ ಕಾರು ಚಾಲಕ ಹುಬ್ಬಳ್ಳಿಯ ಆರೀಫ್ ಅಸೀಫ್ ಅಲಿ ರಿಕಾರ್ತಿ, ತನ್ನ ಕಚೇರಿಯ ಕೆಲಸದ ನಿಮಿತ್ತ ಹುಬ್ಬಳ್ಳಿಯಿಂದ ಯಲ್ಲಾಪುರಕ್ಕೆ ಬಂದು ವಾಪಸ್ ಹುಬ್ಬಳ್ಳಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರೀಫ್ ಅಸೀಫ್‍ಅಲಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ನಗ್ಮಾ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಈ ಕುರಿತು ಮೃತಳ ತಂದೆ ಬೆಳಗಾವಿಯ ನಜೀರ ಮುಕ್ತುಂಸಾಬ ಗುದಗಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಆರೀಫ್ ಅಸೀಫ್‍ಅಲಿ ರಿಕಾರ್ತಿ ವಿರುದ್ಧ ದೂರು ದಾಖಲಿಸಿದ್ದಾರೆ.

=========================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading