ಶಿರಸಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ವಿವಿಧ ಹುದ್ದೆ: ನೇರ ಸಂದರ್ಶನ
ಶಿರಸಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ ಏಜೆಂಟಗಳ ಹಾಗೂ ಫೀಲ್ಡ್ ಆಫೀಸರ್ ಗಳ ಸಂದರ್ಶನ ಮತ್ತು ಆಯ್ಕೆ ಪ್ರಕ್ರಿಯು ಮೇ.18 ರಂದು 11 ಗಂಟೆಗೆ ಹೊಸ ಮಾರುಕಟ್ಟೆ ಆವರಣದ ಶಿರಸಿ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ ಹಾಗೂ ಇತ್ತೀಚಿನ ಭಾವ ಚಿತ್ರದೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಸಹಿತ ಹಾಜರಿರತಕ್ಕದ್ದು.
ಡೈರೆಕ್ಟ್ ಏಜೆಂಟ್ : ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ 18 ವರ್ಷ ಮೇಲ್ಪಟ್ಟವರಾಗಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ಮಾಜಿ ಸೈನಿಕರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯು ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.
ಫೀಲ್ಡ್ ಆಫೀಸರ್: ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿವೃತ್ತ ನೌಕರರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ರೂ.5000 ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕು. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಇಲಾಖೆಯು ಕಾಲ ಕಾಲಕ್ಕೆ ನಿಗದಿಪಡಿಸಿದಂತೆ ಸೂಕ್ತ ಕಮೀಶನ ನೀಡಲಾಗುವುದು. ನಿಗದಿತ ವೇತನವು ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ/ ಸಂಸ್ಥೆ/ ಸಂಘಗಳ ಏಜೆಂಟ್ ಆಗಿರಬಾರದು.
ಹೆಚ್ಚಿನ ಮಾಹಿತಿಗಾಗಿ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿ ಶಿರಸಿ 6362609961 ಹಾಗೂ ವೆಬ್ ಸೈಟ್ ನ್ನು ಸಂಪರ್ಕಿಸುವಂತೆ ಶಿರಸಿ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.