ಸೋಮವಾರ ಪ್ರಕಟವಾದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟ ಉಪಚುನಾವಣೆಗಳ ಜೊತೆಗೆ ಕೇರಳ ರಾಜ್ಯದ ಚುನಾವಣಾ ಫಲಿತಾಂಶಗಳಲ್ಲಿ ಕಾಂಗ್ರೆಸ್ ಪಕ್ಷವು ಅಭೂತಪೂರ್ವ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಯಲ್ಲಾಪುರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಸಂಜೆ ಸಂಭ್ರಮಾಚರಣೆ ನಡೆಸಲಾಯಿತು.

ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿಕೊಂಡು ಸಂಭ್ರಮ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್,

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಡಾ. ರವಿ ಭಟ್ ಬರಗದ್ದೆ, ನಗರ ಘಟಕಾಧ್ಯಕ್ಷ ಸತೀಶ ನಾಯ್ಕ, ಹಿಂದುಳಿದ ವರ್ಗಗಳ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಪ್ರೇಮಾನಂದ ನಾಯ್ಕ,ಪ.ಪಂ ಮಾಜಿ ಅಧ್ಯಕ್ಷರಾದ ಶೀರಿಷ್ ಪ್ರಭು, ಎಮ್.ಡಿ.ಮುಲ್ಲಾ, ತಾಲೂಕು ಗ್ಯಾರಂಟಿ ಅಧ್ಯಕ್ಷ ಉಲ್ಲಾಸ್ ಶಾನಭಾಗ, ಮಹಿಳಾ ಕಾಂಗ್ರೆಸ್‍ನ ಪೂಜಾ ನೇತ್ರಕರ್, ಮುಷರತ್ ಶೇಖ್ ಮುಂತಾದವರು ಉಪಸ್ಥಿತರಿದ್ದರು.

ಯಲ್ಲಾಪುರ ತಾಲೂಕಿನ ಹಿತ್ಲಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಇಳ್ಳೆಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸೋಮವಾರ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕೆಪಿಸಿಸಿ ಸದಸ್ಯರಾದ ವಿವೇಕ್ ಹೆಬ್ಬಾರ್ ಅವರು ಕಾಂಗ್ರೆಸ್ ಸೇರ್ಪಡೆಗೊಂಡ ಕಾರ್ಯಕರ್ತರಿಗೆ ಪಕ್ಷದ ಶಾಲು ಹಾಕಿ ಅತ್ಯಂತ ಆತ್ಮೀಯತೆಯಿಂದ ಪಕ್ಷಕ್ಕೆ ಬರಮಾಡಿಕೊಂಡರು. ಈ ಕಾರ್ಯಕ್ರಮದಲ್ಲಿ ದಿನೇಶ ಕುಣಬಿ, ಬಾಲಚಂದ್ರ ಕುಣಬಿ, ಗಣಪತಿ ಕುಣಬಿ, ನಾರಾಯಣ ಕುಣಬಿ, ಈರಪ್ಪ ಬೋವಿವಡ್ಡರ್, ಸತೀಶ ಕುಣಬಿ,ಕೃಷ್ಣ ಕುಣಬಿ, ಕೃಷ್ಣ ಬಿ. ಗೌಡ ಸೇರಿದಂತೆ ಅನೇಕರು ಕಾಂಗ್ರೆಸ್ ಸೇರ್ಪಡೆಗೊಂಡರು.

ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ವಿ.ಎಸ್.ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ.ಭಟ್, ಡಾ.ರವಿ.ಭಟ್ ಬರಗದ್ದೆ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಡಿ.ಡಿ.ನಾಯ್ಕ, ಹಿಂದುಳಿದ ವರ್ಗದ ಜಿಲ್ಲಾ ಉಪಾಧ್ಯಕ್ಷರಾದ ಪ್ರೇಮಾನಂದ ನಾಯ್ಕ, ತಾಲೂಕಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ನರಸಿಂಹ ನಾಯ್ಕ,ಘಟಕಾಧ್ಯಕ್ಷರಾದ ಶೇಖರ ಸಿದ್ಧಿ, ಸ್ಥಳೀಯ ಮುಖಂಡರಾದ ನಾಗೇಂದ್ರ ಹೆಗಡೆ ಹರಿಗದ್ದೆ, ಆರ್.ಬಿ.ರಾಯ್ಕರ್, ತಾಲೂಕಾ ಪಂಚಾಯತ ಮಾಜಿ ಉಪಾಧ್ಯಕ್ಷರಾದ ಸುಜಾತಾ ಸಿದ್ಧಿ, ಮಾಜಿ ತಾ.ಪಂ ಸದಸ್ಯರಾದ ರಾಧಾ ಹೆಗಡೆ, ಯುವ ಕಾಂಗ್ರೆಸ್ ಕ್ಷೇತ್ರಾಧ್ಯಕ್ಷರಾದ ವಿಶ್ವಾಸ್ ನಾಯ್ಕ, ತಾಲೂಕಾಧ್ಯಕ್ಷರಾದ ಗಣೇಶ ಹೆಗಡೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

=======================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading