ಯಲ್ಲಾಪುರ ಸೀಮಾ ವೈದಿಕ ಪರಿಷತ್ ಆಶ್ರಯದಲ್ಲಿ ಲೋಕಕಲ್ಯಾಣಾರ್ಥವಾಗಿ ಜೂ.5 ಶುಕ್ರವಾರದಂದು ತಾಲೂಕಿನ ಅಣಲಗಾರ ಶ್ರೀಗೋಪಾಲಕೃಷ್ಣ ದೇವಾಲಯದಲ್ಲಿ ಸೀಮಾ ವೈದಿಕ ಸಮಾವೇಶ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಾಗೂ ಗೌರವ ಸಮ್ಮಾನ ಮತ್ತು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 8 ಗಂಟೆಯಿಂದ ಲಕ್ಷ್ಮೀನಾರಾಯಣ ಹೃದಯ 100 ಆವರ್ತನ ಪಾರಾಯಣ, ಭಗವದ್ಗೀತಾ ಸಮಗ್ರ ಪಾರಾಯಣ, ಶ್ರೀಸೂಕ್ತ, ಪುರುಷ ಸೂಕ್ತ ಪಾರಾಯಣ, ವಿಷ್ಣು ಸಹಸ್ರನಾಮ ಸ್ತ್ರೋತ್ರ ಪಠಣ, ಲಕ್ಷ್ಮೀನಾರಾಯಣ ಹೃದಯ ಮಂತ್ರ ಹವನ,ಪೂರ್ಣಾಹುತಿ ನಡೆಯಲಿವೆ.

ಸಭಾ ಕಾರ್ಯಕ್ರಮದಲ್ಲಿ ಹಿರಿಯ ವೈದಿಕರಾದ ವೇ.ನಾರಾಯಣ ಭಟ್ಟ ಮೊಟ್ಟೆಗದ್ದೆ ಇವರಿಗೆ ಗೌರವ ಸಮರ್ಪಣೆ ನಡೆಯಲಿದೆ. ಡಾ.ಶಂಕರ ಭಟ್ಟ ಬಾಲಿಗದ್ದೆ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಯಲ್ಲಾಪುರ ಸೀಮಾ ವೈದಿಕ ಪರಿಷತ್ತಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

=======================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading