ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಯಲ್ಲಾಪುರದಲ್ಲಿ ಗುರುವಾರ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ.

ಗುರುವಾರ ಬೆಳಿಗ್ಗೆ ಮುಸ್ಲಿಂ ಬಾಂಧವರು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿ, ನಂತರ ಕೆ.ಬಿ.ರಸ್ತೆಯ ಪಕ್ಕದಲ್ಲಿರುವ ಈದ್ಗಾ ಮೈದಾನಕ್ಕೆ ಆಗಮಿಸಿ ಪರಸ್ಪರ ಶುಭಾಶಯ ಕೋರಿದರು.

ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮ ಗುರುಗಳಾದ ಶಾಹಿದ್ ರಜಾ ಅವರು ಬಕ್ರೀದ್ ಹಬ್ಬದ ಇತಿಹಾಸ ಮತ್ತು ಮಹತ್ವವನ್ನು ತಿಳಿಸಿ, ಧರ್ಮ ಬೋಧನೆಯನ್ನು ಓದಿದರು.

ಪಟ್ಟಣ ಪಂಚಾಯತ್ ನಿಕಟಪೂರ್ವ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಕೈಸರ್ ಸೈಯದ್ ಅಲಿ ಅವರು ನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು.
ಎಲ್ಲಾ ಜಮಾತಿನ ಮುಖಂಡರು ಉಪಸ್ಥಿತರಿದ್ದರು.
ಸಾವಿರಾರು ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು.

====================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading