ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ ಅವರು ಬುಧವಾರ ಸಂಜೆ ಬೆಂಗಳೂರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೇ ಯಲ್ಲಾಪುರ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆಯ ಮೂಲಕ ಬಸ್ ನಿಲ್ದಾಣ ಸಮೀಪ ಆಗಮಿಸಿ, ಡಿ.ಕೆ.ಶಿವಕುಮಾರ್ ಅವರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಜಯಘೋಷ ಮೊಳಗಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಭಟ್ಟ ಮಾತನಾಡಿ, ನಮ್ಮೆಲ್ಲರ ನೆಚ್ಚಿನ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ನಮಗೆ ಅತೀವ ಸಂತಸವಾಗಿದೆ. ಕಾಂಗ್ರೆಸ್ ಪಕ್ಷವನ್ನು ಯಶಸ್ವಿಯಾಗಿ ಮುನ್ನೆಡೆಸಿದ ಧೀಮಂತ ನಾಯಕರಾದ ಶಿವಕುಮಾರ್ ಅವರ ನೇತ್ರತ್ವದಲ್ಲಿ ರಾಜ್ಯ ಇನ್ನಷ್ಟು ಅಭಿವೃದ್ಧಿ ಪಥದಲ್ಲಿ ಸಾಗಲಿದೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿಯೂ ಸಹ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.

ಪಕ್ಷದ ಪ್ರಮುಖರಾದ ಎನ್.ಕೆ.ಭಟ್ಟ, ಮುರಳಿ ಹೆಗಡೆ, ಆರ್.ಎಸ್.ಭಟ್ಟ, ಸುಬ್ಬಣ್ಣ ಕುಂಟೆಕಳಿ, ವಿಜಯ ಮಿರಾಶಿ, ಮಹೇಶ ನಾಯ್ಕ ಗುಳ್ಳಾಪುರ, ಕೈಸರ್ ಸೈಯದ್ ಅಲಿ, ಸುನಂದಾ ದಾಸ್, ನರ್ಮದಾ ನಾಯ್ಕ, ಸರಸ್ವತಿ ಗುನಗಾ, ಮುಶ್ರತ್ ಮುಂತಾದವರು ಇದ್ದರು.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading