ಕಾರವಾರ: ಯೋಜನಾ ಉದ್ಯೋಗ ವಿನಿಮಯ ಕಚೇರಿ ಕಾರವಾರ ಇವರ ವತಿಯಿಂದ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ. ಹಾಗೂ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಖಾಸಗಿ ಕಂಪನಿಯಾದ ಸ್ವತಂತ್ರ ಮೈಕ್ರೋಪಿನ್ ಪ್ರೈವೇಟ್ ಲಿಮಿಟೆಡ್ ಇವರ ಸಹಯೋಗದಲಿ, ಕುಮಟಾದ ಹೆರವಟ್ಟಾ ಪೋಸ್ಟ್ ಆಫೀಸ್ ಹತ್ತಿರ ಜೂ.10 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯ ವರೆಗೆ, ಖಾಸಗಿ ಕಂಪನಿಯ ಖಾಲಿ ಇರುವ ಹುದ್ದೆಗಳಿಗಾಗಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು , ರೆಸ್ಯೂಮ್‍ಗಳು, ಆಧಾರ ಕಾರ್ಡ್, ಇತ್ತೀಚಿನ ಭಾವಚಿತ್ರ ಪ್ರತಿಯೊಂದಿಗೆ, ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಜ್ಞ ವೈದ್ಯಾಧಿಕಾರಿಗಳ ಹುದ್ದೆ: ನೇರ ಸಂದರ್ಶನ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಡಿಯಲ್ಲಿರುವ ವಿವಿಧ ಕಾರ್ಯಕ್ರಮಗಳಿಗಾಗಿ ತಜ್ಞ ವೈದ್ಯಾಧಿಕಾರಿಗಳ ಹಾಗೂ ವೈದ್ಯಾಧಿಕಾರಿಗಳ ಹುದ್ದೆಗಳು (ಎಂ.ಬಿ.ಎಸ್. ವಿದ್ಯಾರ್ಹತೆ) ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇದ್ದು, ಆಸಕ್ತ ಎಂ.ಡಿ./ಎಂ.ಎಸ್./ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದ ಹಾಗೂ ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿ ಕರ್ನಾಟಕ ಮೆಡಿಕಲ್ ಕೌನ್ಸಿಲ್‍ನಲ್ಲಿ ನೋಂದಣಿ ಹೊಂದಿದ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ , ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆಯ ಡಿ.ಹೆಚ್.ಓ ಕಚೇರಿ ಅಥವಾ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿಯಲ್ಲಿ ಎಲ್ಲ ಮೂಲ ದಾಖಲಾತಿಯೊಂದಿಗೆ ಕಚೇರಿ ವೇಳೆಯಲ್ಲಿ ಹಾಜರಾಗಬಹುದು.
ಮಾರ್ಗಸೂಚಿಯಂತೆ ತಜ್ಞ ವೈಧ್ಯಾಧಿಕಾರಿಗಳಿಗೆ ರೂ.1,30,000 ಹಾಗೂ ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳಿಗೆ ರೂ.60,000 ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.