ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂ.8 ಮಧ್ಯಾಹ್ನ 1 ಗಂಟೆಯಿಂದ ಜೂ.10 ಬೆಳಗ್ಗೆ 8.30 ರ ವರೆಗೆ ರೆಡ್ ಅಲರ್ಟ್ ಇದ್ದು, ಹೆಚ್ಚಿನ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಮುನ್ಸೂಚನೆ ನೀಡಲಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಿಲು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

ಜಿಲ್ಲಾಡಳಿತವು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಸಿದ್ಧತೆಯನ್ನು ಈಗಾಗಲೇ ಕೈಗೊಂಡಿರುತ್ತದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ 24*7 ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿರುತ್ತದೆ.
ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವುದು. ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು ಸಾರ್ವಜನಿಕರು / ಮಕ್ಕಳು /ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು.

ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು ದುರ್ಬಲವಾದ/ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ/ಮರಗಳ ಕೆಳಗೆ ನಿಲ್ಲಬಾರದು. ಈ ಅಂಶಗಳನ್ನು ಗುಡುಗು ಸಿಡಿಲು/ ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸುವುದು.

ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶಿಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌoಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು, ಅಗತ್ಯವಿದ್ದಲ್ಲಿ ಈಗಾಗಲೇ ಸಂಬoಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳುವುದು.

ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುಸಂಕ, ಕಿರು ಸೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸುವುದು. ಶಿಥಿಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌoಡ್ ಅಥವಾ ಮನೆಯ ಗೋಡೆ ಕಂಡುಬಂದಲ್ಲಿ

ತುರ್ತು ಸೇವೆಗೆ ಟೋಲ್ ಪ್ರೀ ಸಂಖ್ಯೆ 24-7 ಕಂಟ್ರೋಲ್ ರೂಂ 08382-229857, ವಾಟ್ಸಪ್ ನಂ:9483511015 ಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಲಕ್ಷ್ಮಿ ಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

========================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading