ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಯಲ್ಲಾಪುರ ತಾಲೂಕಿನ ಕಂಪ್ಲಿ ಮತ್ತು ಹಾಸಣಗಿ ಗ್ರಾಮಪಂಚಾಯತ ವ್ಯಾಪ್ತಿಯ ಬಿಜೆಪಿ ಮುಖಂಡರು ಹಾಗೂ ಅನೇಕ ಕಾರ್ಯಕರ್ತರು ಸೋಮವಾರ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಗೋಪಾಲಕೃಷ್ಣ ಹೆಗಡೆ ಹಾಗೂ ವಿನೋದ ನಾಯ್ಕ ಅವರ ನೇತ್ರತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಭಾರತೀಯ ಜನತಾ ಪಕ್ಷದ ಮುಖಂಡರಾದ ಗೋಪಾಲಕೃಷ್ಣ ಹೆಗಡೆ ಹಾಗೂ ವಿನೋದ ನಾಯ್ಕ ಅವರ ನೇತ್ರತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡ ಕಾರ್ಯಕರ್ತರಿಗೆ ಕೆಪಿಸಿಸಿ ಸದಸ್ಯರಾದ ವಿವೇಕ್ ಹೆಬ್ಬಾರ್ ಅವರು ಪಕ್ಷದ ಶಾಲು ಹಾಕಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.


ಈ ಸಂದರ್ಭದಲ್ಲಿ ಮಾತನಾಡಿದ ವಿವೇಕ್ ಹೆಬ್ಬಾರ್, ಕಾಂಗ್ರೆಸ್ ಪಕ್ಷವು ಸದಾ ಜನಸಾಮಾನ್ಯರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದ ಸಿದ್ಧಾಂತಗಳನ್ನು ನಂಬಿ ಸೇರ್ಪಡೆಗೊಂಡಿರುವ ಕಾರ್ಯಕರ್ತರು ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ವಿ.ಎಸ್. ಭಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಡಿ.ಡಿ.ನಾಯ್ಕ,ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷರಾದ ಪ್ರೇಮಾನಂದ ನಾಯ್ಕ, ಪ್ರಚಾರ ಸಮಿತಿಯ ಅಧ್ಯಕ್ಷರಾದ ನರಸಿಂಹ ನಾಯ್ಕ, ತಾಲೂಕಾ ಪಂಚಾಯತ ಮಾಜಿ ಉಪಾಧ್ಯಕ್ಷರಾದ ಸುಜಾತಾ ಸಿದ್ಧಿ ಪ್ರಮುಖರಾದ ನವೀನ ಹೆಗಡೆ, ರಾಜು ನಾಯ್ಕ, ಚಂದ್ರಶೇಖರ ಮೋಗೆರ್, ಸದಾನಂದ ಮೊಗೆರ್, ಎಮ್.ಕೆ.ಭಟ್, ಗಣೇಶ ರೋಕಡೆ ಸೇರಿದಂತೆ ಪಕ್ಷದ ವಿವಿಧ ಹಂತಗಳ ಪದಾಧಿಕಾರಿಗಳು, ಕಾರ್ಯಕರ್ತರು, ಘಟಕಾಧ್ಯಕ್ಷರು ಹಾಗೂ ಬೂತ್ ಅಧ್ಯಕ್ಷರು ಉಪಸ್ಥಿತರಿದ್ದರು.

=========================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading