ನಿಗದಿತ ಅವಧಿಯೊಳಗೆ ಫಸಲ್ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಸೂಚನೆ
ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯ ಮುಂಗಾರು ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹತ್ತಿ ಬೆಳೆಗಳನ್ನು ಪಂಚಾಯತಿ ಮಟ್ಟಕ್ಕೆ ಅಧಿಸೂಚಿಸಲಾಗಿದ್ದು, ಬಿತ್ತನೆಯಿಂದ ಹಿಡಿದು ಕಟಾವಿನ ನಂತರದ ಅವಧಿಯವರೆಗೆ ಎದುರಾಗಬಹುದಾದ ಪ್ರಕೃತಿ ವಿಕೋಪಗಳಿಂದ ಉಂಟಾಗುವ ನಷ್ಟಕ್ಕೆ ಪರಿಹಾರ ಪಡೆಯಲು ಈ ಯೋಜನೆ ಸಹಕಾರಿಯಾಗಿದೆ. ಆದ್ದರಿಂದ, ಜಿಲ್ಲೆಯ ಎಲ್ಲಾ ಅರ್ಹ ರೈತ ಬಾಂಧವರು ನಿಗದಿತ ಅವಧಿಯೊಳಗೆ ಈ ಬೆಳೆ ವಿಮಾ ಯೋಜನೆಯಡಿ ನೋಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆಯಲು ಕೋರಲಾಗಿದೆ.
ಯೋಜನೆಯಡಿ ರೈತರು ಪಾವತಿಸಬೇಕಾದ ಪ್ರೀಮಿಯಂ ದರಗಳು ಮತ್ತು ವಿಮಾ ರಕ್ಷಣೆ : ಭತ್ತ (ಮಳೆ ಆಶ್ರಿತ) ಪ್ರತಿ ಎಕರೆಗೆ ವಿಮಾ ಮೊತ್ತ 30,595 ರೂ, ಪಾವತಿಸಬೇಕಾದ ಪ್ರೀಮಿಯಂ ಮೊತ್ತ 612 ರೂಪಾಯಿ. ಈ ಯೋಜನೆಯು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಅನ್ವಯಿಸುತ್ತದೆ. ಭತ್ತ (ನೀರಾವರಿ ಆಶ್ರಿತ) ಪ್ರತಿ ಎಕೆರೆಗೆ ಮೊತ್ತ 43,950 ಕ್ಕೆ ಪಾವತಿಸಬೇಕಾದ ಪ್ರೀಮಿಯಂ ಮೊತ್ತ 879 ಈ ಯೋಜನೆಯು ಮುಂಡಗೋಡ ಮತ್ತು ಹಳಿಯಾಳ ತಾಲೂಕಿನ ಆಯ್ದ ಗ್ರಾಮ ಪಂಚಾಯತಿಗಳಿಗೆ ಅನ್ವಯಿಸುತ್ತದೆ. ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನವಾಗಿದೆ.
ಮೆಕ್ಕೆ ಜೋಳ (ಮಳೆ ಆಶ್ರಿತ) ಪ್ರತಿ ಎಕೆರೆಗೆ ವಿಮಾ ಮೊತ್ತ 27,317 ಪಾವತಿಸಬೇಕಾದ ಪ್ರೀಮಿಯಂ ಮೊತ್ತ 546 ರೂಪಾಯಿ ಪಾವತಿಸಲು ಜುಲೈ 31 ಕೊನೆಯ ದಿನವಾಗಿದೆ. ಈ ಯೋಜನೆಯು ಮುಂಡಗೋಡ, ಶಿರಸಿ ಮತ್ತು ಹಳಿಯಾಳ ತಾಲೂಕಿನ ಆಯ್ದ ಗ್ರಾಮ ಪಂಚಾಯತಿಗಳಿಗೆ ಅನ್ವಯಿಸುತ್ತದೆ. ಹತ್ತಿ (ಮಳೆ ಆಶ್ರಿತ) ಪ್ರತಿ ಎಕರೆಗೆ ವಿಮಾ ಮೊತ್ತ 24,161 ರೂ, ಪಾವತಿಸಬೇಕಾದ ಪ್ರೀಮಿಯಂ ಮೊತ್ತ 1,208 ರೂಪಾಯಿ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯಾಗಿರುತ್ತದೆ. ಈ ಯೋಜನೆಯು ಹಳಿಯಾಳ ತಾಲೂಕಿನ ಎಲ್ಲಾ ಹೋಬಳಿಗಳಿಗೆ ಅನ್ವಯಿಸುತ್ತದೆ.
ನೋಂದಣಿಯನ್ನು ಅಗತ್ಯ ದಾಖಲೆಗಳಾದ ಫ್ರೂಟ್ಸ್ ಐಡಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ನಕಲು, ಜಮೀನಿನ ಪಹಣಿ, ಝರಾಕ್ಸ್ ಪ್ರತಿಗಳು ಹಾಗೂ ಬೆಳೆ ವಿಮೆಯ ಪ್ರಯೋಜನ ಪಡೆಯಲು ರೈತ ಬಾಂಧವರು ತಮ್ಮ ಹತ್ತಿರದ ರಾಷ್ಟ್ರೀಕೃತ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್, ಸಿ.ಎಸ್.ಸಿ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಇಸ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಸಹಾಯವಾಣಿ ಸಂಖ್ಯೆ: 1800-103-5499 ಹಾಗೂ ಹತ್ತಿರದ ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿಗಳು, ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.