ತೀವೃವಾದ ಜ್ವರದಿಂದ ಬಳಲುತ್ತಿದ್ದ ಯಲ್ಲಾಪುರ ತಾಲೂಕಿನ ಚವತ್ತಿಯ 41 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದವರು, ಚಿಕಿತ್ಸೆ ಫಲಕಾರಿಯಾಗದೇ ರವಿವಾರ ಮೃತಪಟ್ಟಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಇವರು, ಜೂ.10 ರಂದು ಉಮ್ಮಚಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ ಜೂ.12 ರಂದು ಮಂಚಿಕೇರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಜೂ.16ರಂದು ಜ್ವರ ಹೆಚ್ಚಾಗಿ, ಶಿರಸಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದ ಇವರು, ವೈದ್ಯರ ಸಲಹೆಯಂತೆ ಮಂಗಳೂರಿನ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ರವಿವಾರ ಮೃತಪಟ್ಟಿದ್ದಾರೆ.

ಇವರಿಗೆ ಇನ್ಫುಯೆಂಜಾ ಎ ವೈರಲ್ ಜ್ವರ/ಶೀತ ಜ್ವರ/ಪ್ಲೂ ಖಚಿತಪಟ್ಟಿತ್ತು. ಆರೋಗ್ಯ ಇಲಾಖೆಯವರು ಮೃತಪಟ್ಟ ವ್ಯಕ್ತಿಯ ಮನೆಗೆ ಭೇಟಿನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ಫುಯೆಂಜಾ ಎ ವೈರಲ್ ಜ್ವರವು ಮೂಗು, ಗಂಟಲು, ಶ್ವಾಸಕೋಶವನ್ನು ಬಾಧಿಸುವ ಸಾಂಕ್ರಾಮಿಕ ಕಾಯಿಲೆಯಾಗಿದೆ. ತೀವ್ರ ಜ್ವರ, ಮೈಕೈ ನೋವು, ಕೆಮ್ಮು, ನೆಗಡಿ, ತಲೆನೋವು, ಗಂಟಲು ನೋವು ಮತ್ತು ಸುಸ್ತು ಉಸಿರಾಟದ ತೊಂದರೆ ಕಂಡುಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿನೀಡಿ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯಬೇಕು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

=======================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading