



ಪ್ರವಾಸೋದ್ಯಮ ಚಟುವಟಿಕೆಗಳಿಗೆ ಹೆಚ್ಚಿನ ಸಾಲ ವಿತರಿಸಿ : ಡಾ.ದಿಲೀಷ್ ಶಶಿ

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಆರಂಭಿಸುವುವರಿಗೆ ಜಿಲ್ಲೆಯಲ್ಲಿನ ಎಲ್ಲಾ ಬ್ಯಾಂಕುಗಳು, ಹೆಚ್ಚಿನ ಸಂಖ್ಯೆಯಲ್ಲಿ ಸಾಲವನ್ನು ವಿತರಿಸುವ ಮೂಲಕ ಪ್ರವಾಸೋದ್ಯಮ ಬೆಳವಣಿಗೆಗೆ ಮತ್ತು ಬ್ಯಾಂಕುಗಳ ಸಾಲ ಮತ್ತು ಠೇವಣಿ ಅನುಪಾತದಲ್ಲಿ ನಿಗಧಿತ ಗುರಿ ಸಾಧಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ನಿರ್ದೇಶನ ನೀಡಿದರು.

ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕುರಿತಂತೆ ಮುಖ್ಯಮಂತ್ರಿಗಳು ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಜಿಲ್ಲೆಯಲ್ಲಿ ಏರ್ ಪೋರ್ಟ್ ಸಹ ಶೀಘ್ರದಲ್ಲಿ ಆರಂಭವಾಗಲಿದ್ದು, ಮುಂದಿನ 5 ರಿಂದ 6 ವರ್ಷಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿಯಾಗಲಿದ್ದು, ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸುವವರಿಗೆ, ಬಂಡವಾಳ ಹೂಡಿಕೆದಾರರಿಗೆ ಬ್ಯಾಂಕ್‍ಗಳು ಹೆಚ್ಚಿನ ಪ್ರಮಾಣದ ಸಾಲಗಳನ್ನು ಆದ್ಯತೆಯಲ್ಲಿ ವಿತರಿಸುವ ಮೂಲಕ, ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಮತ್ತು ಬ್ಯಾಂಕ್‍ಗಳ ಸಾಲ ಮತ್ತು ಠೇವಣಿ ಅನುಪಾತದಲ್ಲಿ ನಿಗಧಿತ ಗುರಿ ಸಾಧಿಸಲು ಸಾಧ್ಯವಿದೆ ಎಂದರು.

ಮಾರ್ಚ್ 2026 ರ ತ್ರೈಮಾಸಿಕ ಅಂತ್ಯದಲ್ಲಿ ಜಿಲ್ಲೆಯ ಬ್ಯಾಂಕ್‍ಗಳಲ್ಲಿ ಒಟ್ಟು ರೂ.27,064 ಕೋಟಿ ಠೇವಣಿ ಸಂಗ್ರಹ ಮತ್ತು ರೂ.12,528 ಕೋಟಿ ಸಾಲ ವಿತರಣೆ ಮಾಡಿದ್ದು, ಸಾಲ ಮತ್ತು ಠೇವಣಿ ಅನುಪಾತ ಶೇ.46.29 ಮಾತ್ರ ಇದ್ದು, ಪ್ರಸಕ್ತ ವರ್ಷದಲ್ಲಿ ಈ ಅನುಪಾತವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಎಲ್ಲಾ ಬ್ಯಾಂಕ್‍ಗಳು ಪ್ರತ್ಯೇಕವನ್ನು ಯೋಜನೆಯನ್ನು ರೂಪಿಸಿ ನಿಗಧಿತ ಗುರಿ ಸಾಧಿಸುವಂತೆ ಸೂಚಿಸಿದರು.
ಸಭೆಯಲ್ಲಿ ವಿವಿಧ ಸರ್ಕಾರಿ ಯೋಜನೆಗಳಿಗೆ ಬ್ಯಾಂಕ್ ಗಳಿಂದ ನೀಡುತ್ತಿರುವ ಸಾಲಗಳ ಕುರಿತು ವಿಸ್ತøತವಾಗಿ ಚರ್ಚಿಸಲಾಯಿತು.
ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕರೀಂ ಅಸಾದಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಕೆನರಾ ಬ್ಯಾಂಕ್ ಪ್ರಾದೇಶಿಕ ಮೆನೇಜರ್ ನಾಗರಾಜ್, ನಬಾರ್ಡ್ ಬ್ಯಾಂಕ್ ಮೆನೇಜರ್ ಸುಶೀಲ್, ಲೀಡ್ ಬ್ಯಾಂಕ್ ಮೆನೇಜರ್ ರಾಜಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಎಲ್ಲಾ ಬ್ಯಾಂಕ್ ಗಳ ಅಧಿಕಾರಿಗಳು ಇದ್ದರು.
ಪ್ರವಾಸೋದ್ಯಮ, ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ
ಪ್ರವಾಸೋದ್ಯಮ /ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಎಸ್.ಸಿ.ಪಿ /ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ /ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಪ್ರವಾಸೋದ್ಯಮ ಇಲಾಖೆಯಿಂದ ಉದ್ದೇಶಿಸಲಾಗಿದೆ. ಆಸಕ್ತಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜು.7 ರಿಂದ ರೊಳಗೆ ಅರ್ಜಿ ಸಲ್ಲಿಸಬೇಕು.
ವಾ.ಕ.ರ.ಸಾ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ

ಪ್ರಸಕ್ತ ಸಾಲಿನ ಮೊಹರಂ ಹಬ್ಬ ಹಾಗೂ ವಾರಂತ್ಯದ ರಜೆ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುವ ನಿರೀಕ್ಷೆಯಿರುವುದರಿಂದ ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 200 ಹೆಚ್ಚುವರಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಜೂ.25 ಹಾಗೂ ಜೂ.26 ರಂದು ಬೆಂಗಳೂರಿನಿಂದ ರಾಜ್ಯ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಸಂಸ್ಥೆಯ ಘಟಕಗಳ ವ್ಯಾಪ್ತಿಯ ವಿವಿಧ ಗಮ್ಯಸ್ಥಾನಗಳಿಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ
ಸದರಿ ವಿಶೇಷ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

====================






















