ಹಳೆಯ ಪಿಂಚಣಿ ಯೋಜನೆಯನ್ನು (ಓಪಿಎಸ್) ಮರು ಜಾರಿಗೊಳಿಸಲು ಆಗ್ರಹಿಸಿ ಯಲ್ಲಾಪುರ ತಾಲೂಕಾ ಮಾಧ್ಯಮಿಕ ಶಾಲಾ ನೌಕರರ ಸಂಘದಿಂದ ಶನಿವಾರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

1-04- 2006ರ ಮುಂಚೆ ಅನುದಾನಿತ ಶಾಲೆಗಳಲ್ಲಿ ನೇಮಕಾತಿ ಹೊಂದಿ 2006ರ ನಂತರ ಅನುದಾನಕ್ಕೆ ಒಳಪಟ್ಟಿರುವಂತಹ ಶಿಕ್ಷಕರಿಗೆ ಹಿಂದಿನ ಸೇವೆಯನ್ನು ಪರಿಗಣಿಸಿ ಓ ಪಿ ಎಸ್ ಯೋಜನೆಯನ್ನು ಶೀಘ್ರ ಜಾರಿಗೊಳಿಸಲು ಮತ್ತು 1-04-2006 ನಂತರ ನೇಮಕವಾದವರಿಗೂ ಸಹ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸೂಚಿಸಿದಂತೆ ಓಪಿಎಸ್ ಜಾರಿಗೊಳಿಸಲು ಬಸವರಾಜ ಹೊರಟ್ಟಿ ಅವರ ಕಾಲ್ಪನಿಕ ವೇತನದ ಮೇಲಿನ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವುದು.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಗೆ ನೀಡುವ ಜ್ಯೋತಿ ಸಂಜೀವಿನಿ(ಸಿರಿ) ಹಾಗೂ ಇನ್ನಿತರ ಆದೇಶಗಳನ್ನು ಯಥಾವತ್ತಾಗಿ ತಾರತಮ್ಯವಿಲ್ಲದೆ ಜಾರಿಗೊಳಿಸುವುದು. ಅನುದಾನಿತ ಮತ್ತು ಸರಕಾರಿ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ತಾರತಮ್ಯವಿಲ್ಲದಂತೆ ಕಾರ್ಯಕ್ರಮವನ್ನ ಹಮ್ಮಿಕೊಳ್ಳುವುದು. ಮಲೆನಾಡಿನ ಪ್ರದೇಶಗಳ ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಅನುಪಾತವನ್ನು ಕಡಿಮೆಗೊಳಿಸಿ ಆದೇಶ ನೀಡುವುದು ಮುಂತಾದ ಹಲವಾರು ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಮಾಧ್ಯಮಿಕ ನೌಕರ ಸಂಘದ ಕೇಂದ್ರ ಸಮಿತಿಯ ಸದಸ್ಯ, ಹೋಲಿರೋಜರಿ ಪ್ರೌಢಶಾಲೆಉ ಮುಖ್ಯಾಧ್ಯಾಪಕ ಎಂ ರಾಜಶೇಖರ ಮಾತನಾಡಿ 30 ವರ್ಷಕ್ಕೂ ಹೆಚ್ಚಿನ ಅವಧಿಗಳ ಕಾಲ ನಿಸ್ವಾರ್ಥ ಸೇವೆ ಸಲ್ಲಿಸಿ ಬರಿಗೈಯಲ್ಲಿ ಮನೆಗೆ ಹೋಗುವ ಶಿಕ್ಷಕರ ಪಾಡು ಯಾರಿಗೂ ಬರಬಾರದು, ಈ ರೀತಿಯ ಮಲತಾಯಿ ಧೋರಣೆಯಿಂದ ಅನೇಕ ಶಿಕ್ಷಕರು ಇಂದು ಭ್ರಮನೀರಸನಗೊಂಡಿದ್ದಾರೆ. ವಿವಿಧ ಸಮಸ್ಯೆಗಳನ್ನು ಪರಿಹರಿಸಿ, ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಾಧ್ಯಮಿಕ ನೌಕರರ ಸಂಘದ ತಾಲೂಕ ಸಮಿತಿಯ ಅಧ್ಯಕ್ಷ ವಿನಾಯಕ ಹೆಗಡೆ ಕಾರ್ಯದರ್ಶಿ ಶರಣಬಸವ ಬೇವಿನಕಟ್ಟಿ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ತಾಲೂಕಿನ ಎಲ್ಲಾ ಅನುದಾನಿತ ಶಾಲೆಗಳ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಇದ್ದರು.

=========================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading