



ಗಾಳಿ, ಮಳೆಯ ಅಬ್ಬರ: ಹೆದ್ದಾರಿಯಲ್ಲಿ ಅಡ್ಡಲಾಗಿ ಬಿದ್ದ ಬೃಹತ್ ಮರ

ಮಳೆ ಹಾಗೂ ಗಾಳಿಯ ರಭಸಕ್ಕೆ ಯಲ್ಲಾಪುರ ಪಟ್ಟಣ ಸಮೀಪದ ಹಳಿಯಾಳ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರವೊಂದು ಮುರಿದುಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ.


ಮರ ಬಿದ್ದ ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ಹೆದ್ದಾರಿಯ ಇಕ್ಕೆಲಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮರಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳಿಗೆ, ವಿದ್ಯುತ್ ಲೈನ್ ಗಳಿಗೆ ಹಾನಿಯಾಗಿತ್ತು. ಕೆಲವು ಗಂಟೆಗಳಕಾಲ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು.

ಅರಣ್ಯ ಇಲಾಖೆಯವರು ಹಾಗೂ ಹೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ, ಹೆದ್ದಾರಿಯಲ್ಲಿ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು. ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟರು

============================




