ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ – 2026ರ ಅಂಗವಾಗಿ ಮುಂಡಗೋಡ ನಗರದಲ್ಲಿನ ಸೋಮವಾರದ ಸಂತೆ ಮಾರುಕಟ್ಟೆ ಮತ್ತು ಗ್ರಾಮೀಣ ಭಾಗದ ಮಾರುಕಟ್ಟೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮಕ್ಕೆ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ತಾಲೂಕು ಸ್ವೀಪ್ ನೋಡಲ್ ಅಧಿಕಾರಿ ಟಿ.ವಾಯ್. ದಾಸನಕೊಪ್ಪ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಸಂತೆಯಲ್ಲಿ ವ್ಯಾಪಾರಸ್ಥರು ಮತ್ತು ಸಾರ್ವಜನಿಕರನ್ನು ಭೇಟಿಯಾಗಿ, ಎಸ್.ಆಯ್.ಆರ್. ಬಗ್ಗೆ ಉಪಯುಕ್ತ ಮಾಹಿತಿ ನೀಡಿ, ಈಗಾಗಲೇ ಎಲ್ಲ ಮನೆಗಳಿಗೂ ಗಣತಿ ನಮೂನೆಗಳನ್ನು ವಿತರಣೆ ಮಾಡಲಾಗಿದ್ದು, ಜುಲೈ 29 ರೊಳಗಾಗಿ ಭರ್ತಿ ಮಾಡಿದ ನಮೂನೆಗಳನ್ನು ಬೂತ್ ಮಟ್ಟದ ಅಧಿಕಾರಿಗಳಿಗೆ ಕಡ್ಡಾಯವಾಗಿ ಹಿಂದಿರುಗಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಯೋಜನಾ ಅಧಿಕಾರಿ ಚೋಳಪ್ಪ ಬಣಕಾರ ಸೇರಿದಂತೆ ತಾಲೂಕು ಪಂಚಾಯತಿಯ ಅಧಿಕಾರಿಗಳು, ಎನ್.ಆರ್.ಎಲ್.ಎಮ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

===================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading