ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷÀನ್ ಫಾರ್ಮ್ ಗಳನ್ನು ವಿತರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 5,91,369 ಫಾರ್ಮಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ

ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಒಟ್ಟು 8363 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 1578 ಶಾಶ್ವತ ವಲಸೆ ಹಾಗೂ 6120 ಮರಣ ಹೊಂದಿದ ಪ್ರಕರಣಗಳು, 616 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.

ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯಲ್ಲಿ 18 ರಿಂದ 50 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಆಗಸ್ಟ್ ತಿಂಗಳ ಮೊದಲ ವಾರದಿಂದ 30 ದಿನಗಳ ಇಲೆಕ್ಟ್ರೀಕ ವೇಹಿಕಲ್ ಸರ್ವಿಸಿಂಗ್ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.
ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಈ ತರಬೇತಿಯಿಂದ ಸ್ವ ಉದ್ಯೋಗ ಪ್ರಾರಂಭಿಸಿ ಸ್ವಾಲಂಬಿ ಜೀವನ ನಡೆಸಲು ಅನುಕೂಲವಾಗಲಿದ್ದು, ತರಬೇತಿ ಅವಧಿಯಲ್ಲಿ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.

ಶಿರಸಿ ನಗರದ ಸರ್ಕಾರಿ ಆಸ್ಪತ್ರೆ ಅಭಿವೃದ್ದಿ ಕುರಿತು ಕೇಳಿದ್ದ ಏಳು ಪ್ರಶ್ನೆಗಳಿಗೆ ಇದುವರೆಗೂ ಶಾಸಕರು ಹಾಗೂ ಅಧಿಕಾರಿಗಳು ಯಾವುದೇ ಉತ್ತರ ನೀಡಿಲ್ಲ. ಆಸ್ಪತ್ರೆಯನ್ನು ಮೂಲ ಸ್ವರೂಪದಲ್ಲಿಯೇ ಕಾರ್ಯಾರಂಭಗೊಳಿಸದೆ ಹಾಳು ಮಾಡಲಾಗುತ್ತಿದೆ ಎಂದು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಆರೋಪಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಸ್ಪತ್ರೆ ಕುರಿತು ಏಳು ಪ್ರಶ್ನೆಗಳನ್ನು ಕೇಳಿ ತಿಂಗಳಾದರೂ ಉತ್ತರ ಸಿಕ್ಕಿಲ್ಲ. ಈ ಮೌನವೇ ಸಮ್ಮತಿಯ ಲಕ್ಷಣವಾಗಿದೆ. ಆಸ್ಪತ್ರೆಯ ವಿಚಾರದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿತ್ತು ಎಂದರು. ಶಿರಸಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಸೇರಿದಂತೆ ಎಲ್ಲ ವಿಶೇಷ ಚಿಕಿತ್ಸಾ ಸೌಲಭ್ಯಗಳು ಲಭ್ಯವಾಗಬೇಕು. ಆಸ್ಪತ್ರೆಯನ್ನು ಪೂರ್ಣ ಪ್ರಮಾಣದ ಟ್ರಾಮಾ ಸೆಂಟರ್ ಆಗಿ ಅಭಿವೃದ್ಧಿಪಡಿಸಬೇಕು ಎಂದು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಆಗಸ್ಟ್ 1ರೊಳಗೆ ಆಸ್ಪತ್ರೆ ಅಭಿವೃದ್ಧಿ ಕುರಿತು ಸ್ಪಷ್ಟ ಉತ್ತರ ನೀಡದಿದ್ದರೆ ಹಾಗೂ ಅಗತ್ಯ ಪ್ರಕ್ರಿಯೆ ಆರಂಭಿಸದಿದ್ದರೆ ಪಾದಯಾತ್ರೆ, ಧರಣಿ ಸೇರಿದಂತೆ ಉಗ್ರ ಹೋರಾಟ ನಡೆಸಲಾಗುವುದು. ಹಳ್ಳಿಹಳ್ಳಿಗೆ ತೆರಳಿ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸುವ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಅನಂತಮೂರ್ತಿ ಹೆಗಡೆ ಎಚ್ಚರಿಕೆ ನೀಡಿದರು.

ಪ್ರಮುಖರಾದ ಉಷಾ ಹೆಗಡೆ ಸುರೇಶ್ ನಾಯ್ಕ ಕಾನಗೋಡ, ನಾರಾಯಣ ಹೆಗಡೆ ಮತ್ತಿಘಟ್ಟ, ರವಿ ಗಾಂವ್ಕರ್, ರಾಘವೇಂದ್ರ ನಾಯ್ಕ ಇದ್ದರು.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading