





ಜಿಲ್ಲೆಯಲ್ಲಿ ಶೇ.25 ರಷ್ಟು ಮಳೆಯ ಕೊರತೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಜೂನ್ ತಿಂಗಳಿನಿಂದ ಜುಲೈ 15 ರ ವರೆಗೆ ವಾಡಿಕೆಗಿಂತ ಶೇ.25 ರಷ್ಟು ಕಡಿಮೆ ಮಳೆಯಾಗಿದ್ದು, ಸಾಮಾನ್ಯವಾಗಿ ಈ ಅವಧಿಯಲ್ಲಿ 1265 ಮಿಮೀ ಮಳೆ ಬೀಳಬೇಕಾಗಿದ್ದು, 945.4 ಮಳೆ ಬಂದಿದ್ದು ಮಳೆಯ ಕೊರತೆ ಕಂಡುಬಂದಿದೆ.
ಜಿಲ್ಲೆಯ ಅಂಕೋಲ ತಾಲೂಕಿನಲ್ಲಿ ಶೇ.31, ಭಟ್ಕಳ ಶೇ.37,ಹಳಿಯಾಳ ಶೇ.31,ಹೊನ್ನಾವರ ಶೇ.19,ಕಾರವಾರ ಶೇ.20,ಕುಮಟಾ ಶೇ.21,ಮುಂಡಗೋಡು ಶೇ.23,ಸಿದ್ದಾಪುರ ಶೇ.12,ಶಿರಸಿ ಶೇ.8,ಸೂಪಾ ಶೇ.11,ಯಲ್ಲಾಪುರ ಶೇ.38 ಮತ್ತು ದಾಂಡೇಲಿಯಲ್ಲಿ ಶೇ.12 ರಷ್ಟು ಮಳೆಯ ಕೊರತೆ ಕಂಡುಬಂದಿದ್ದು, ಕಳೆದ ಒಂದು ವಾರದ ಅವಧಿಯಲ್ಲಿ ವಾಡಿಕೆ ಮಳೆ 217.5 ಮೀ ಆಗಬೇಕಾಗಿದ್ದು,ಆದರೆ 38.4 ಮಿಮೀ ಮಾತ್ರ ಮಳೆ ಆಗುವ ಮೂಲಕ ಶೇ.82 ರಷ್ಟು ಮಳೆಯ ಕೊರತೆಯಾಗಿದೆ.
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕಕರಣೆ : ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕಕರಣೆ-2026 ಕಕೆ ಸಂಬಂದಿಸಿದಂತೆ ಪರಿಷ್ಕೃತ ವೇಳಾಪಟ್ಟಿಯನ್ನುಪ್ರಕಟಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯಂತೆ ಆಗಸ್ಟ್ 8ರವರೆಗೆ ಬಿಎಲ್‍ಒಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 8ರಂದು ಮತಗಟ್ಟೆಗಳ ಮರುಜೋಡಣೆ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ 17ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಿದ್ದು, ಸೆಪ್ಟೆಂಬರ್ 16ರವರೆಗೆ ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಲ್ಲಿಕೆಯಾಗುವ ಅರ್ಜಿಗಳು ಮತ್ತು ಆಕ್ಷೇಪಣೆಗಳ ಪರಿಶೀಲನೆ ಹಾಗೂ ವಿಲೇವಾರಿ ಪ್ರಕ್ರಿಯೆಯು ಅಕ್ಟೋಬರ್ 15ರವರೆಗೆ ನಡೆಯಲಿದ್ದು, ಅಕ್ಟೋಬರ್ 19ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ 6,84,736 ಎನ್ಯುಮರೇಷನ್ ಫಾರ್ಮ್ ಗಣಕೀಕರಣ: ಜಿಲ್ಲಾಧಿಕಾರಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್‍ಗಳನ್ನು ವಿತರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 6,84,736 ಫಾರ್ಮ್‍ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.
ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಒಟ್ಟು 11449 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 2357 ಶಾಶ್ವತ ವಲಸೆ ಹಾಗೂ 8158 ಮರಣ ಹೊಂದಿದ ಪ್ರಕರಣಗಳು, 834 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.

==============













