ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಯಲ್ಲಾಪುರ ಶಾಖೆಗೆ ಶಿಕ್ಷಣ ಸಂಯೋಜಕ ಸುಧಾಕರ ನಾಯಕ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

ಸುಧಾಕರ ನಾಯಕ

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿರುವ ಸುಧಾಕರ ನಾಯಕ ಅವರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ಯಾರಾ ಲೀಗಲ್ ವಾಲೆಂಟಿಯರ್ ಆಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಸುಧಾಕರ ನಾಯಕ ಅವರು ಅನೇಕ ವರ್ಷಗಳಿಂದ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಇವರು ತಾಲೂಕಿನ ವಿವಿಧ ಶಾಲೆಗಳಲ್ಲಿ ಸ್ಮರಣೀಯ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಮತ್ತು ಪಾಲಕರ ಮೆಚ್ಚಿನ ಶಿಕ್ಷಕರಾಗಿ ಗುರುತಿಸಿಕೊಂಡಿದ್ದಾರೆ.

ಪ್ರಸ್ತುತ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಶಿಕ್ಷಣ ಸಂಯೋಜಕರಾಗಿ ಮಹತ್ವದ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಧಾಕರ ನಾಯಕ ಅವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸೇರಿದಂತೇ ವಿವಿಧ ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

ವಿಶ್ರಾಂತ ಜಿಲ್ಲಾ ನ್ಯಾಯಾಧೀಶರಾದ ರವಿ ನಾಯ್ಕ ಅವರು ಶನಿವಾರ ಯಲ್ಲಾಪುರ ಪಟ್ಟಣದ ಸರ್ಕಾರಿ ನೌಕರರ ಭವನಕ್ಕೆ ಭೇಟಿನೀಡಿದ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸುಧಾಕರ ನಾಯಕ

ತನ್ನ ವೃತ್ತಿ, ಪ್ರವೃತ್ತಿಯಲ್ಲಿ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡಿರುವ ಸುಧಾಕರ ನಾಯಕ ಅವರು ಈಗ ತಾಲೂಕಾ ಸರ್ಕಾರಿ ನೌಕರರ ಸಂಘದ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿರುವುದು ಸಂಘಕ್ಕೆ ಮತ್ತಷ್ಟು ಶಕ್ತಿ ಬಂದಂತಾಗಿದೆ.

ಸುಧಾಕರ ನಾಯಕ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ, ಬಿ.ಆರ್.ಸಿ. ಸಂತೋಷ ಜಿಗಳೂರು, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್ಟ, ತಾ.ಸ.ನೌ.ಸಂ.ಅಧ್ಯಕ್ಷ ಸಂಜೀವ ಹೊಸಕೇರಿ ಅಭಿನಂದಿಸಿದ್ದಾರೆ.

========================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading