ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್‍ ಗಳನ್ನು ವಿತರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 9,62,262 ಫಾರ್ಮ್‍ ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಒಟ್ಟು 32057 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 8195 ಶಾಶ್ವತ ವಲಸೆ ಹಾಗೂ 20,550 ಮರಣ ಹೊಂದಿದ ಪ್ರಕರಣಗಳು, 2975 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.

ಚೀನಾದಲ್ಲಿ ಇತ್ತೀಚೆಗೆ ನಡೆದ 23 ವರ್ಷದೊಳಗಿನ ಅಥ್ಲೆಟಿಕ್ ಚಾಂಪಿಯನ್ ಶಿಪ್ ನ 5000 ಮತ್ತು 10000 ಮೀ ನಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರ, ರಾಜ್ಯ ಮತ್ತು ಜಿಲ್ಲೆಯ ಕೀರ್ತಿಯನ್ನು ಬೆಳಗಿರುವ ಜಿಲ್ಲೆಯ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಕ್ರೀಡಾಪಟು ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರ ಸಾಧನೆ ಜಿಲ್ಲೆಯ ಎಲ್ಲಾ ಕ್ರೀಡಾಪಟುಗಳಿಗೆ ಸ್ಪೂರ್ತಿಯಾಗಲಿ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಹೇಳಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಕ್ರೀಡಾಪಟು ಶಿವಾಜಿ ಅವರಿಗೆ ಅವರ ಸಾಧನೆಯನ್ನು ಅಭಿನಂದಿಸಿ ಜಿಲ್ಲಾಡಳಿತದ ಮೂಲಕ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಳಿಯಾಳ ತಾಲೂಕಿನ ಸಣ್ಣ ಪ್ರದೇಶದಿಂದ ಬಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ರೀತಿಯ ಸಾಧನೆ ಮಾಡಿರುವುದು ನಮ್ಮೆಲ್ಲರಿಗೂ ಹಾಗೂ ಇಡೀ ಜಿಲ್ಲೆಗೆ ಅತ್ಯಂತ ಹೆಮ್ಮೆಯ ವಿಷಯವಾಗಿದ್ದು, ಜಿಲ್ಲೆಯನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ. ಕ್ರೀಡಾಪಟು ಶಿವಾಜಿ ಅವರು ಶಿಸ್ತು ಮತ್ತು ದಿನನಿತ್ಯದ ಕಠಿಣ ಪರಿಶ್ರಮದಿಂದ ಈ ಸಾಧನೆ ಮಾಡಿದ್ದು, ಅವರ ಸಾಧನೆಗಳು ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿ ಮತ್ತು ಶಿವಾಜಿ ಅವರಿಗೆ ಮುಂದಿನ ಎಲ್ಲಾ ಕ್ರೀಡಾ ಪಯಣಕ್ಕೂ ಅಗತ್ಯವಿರುವ ಸಂಪೂರ್ಣ ಬೆಂಬಲ ಮತ್ತು ಸಹಕಾರವನ್ನು ಜಿಲ್ಲಾಡಳಿತದ ವತಿಯಿಂದ ನೀಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ಮಾತನಾಡಿ, ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತಮ ಸಾಧನೆ ಮಾಡುವಂತ ಪ್ರಾಕೃತಿಕ ವಾತಾವರಣವಿದ್ದು , ಕಾರವಾರದ ಜಿಲ್ಲಾ ಕ್ರೀಡಾಂಗಣವನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಪೋಷಕರು ಮಕ್ಕಳಿಗೆ ಕ್ರೀಡೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ವಿದ್ಯಾರ್ಥಿಗಳು ಪಠ್ಯದಲ್ಲಿ ಮಾತ್ರವಲ್ಲದೇ ಕ್ರೀಡೆ ಮತ್ತು ಸಾಂಸ್ಕøತಿಕ ರಂಗದಲ್ಲೂ ಕೂಡಾ ತೊಡಗಿಕೊಳ್ಳಬೇಕು ಎಂದರು.

ಜಿಲ್ಲಾಡಳಿತ ಅಭಿನಂದನೆ ಸ್ವೀಕರಿಸಿ ಮಾತನಾಡಿದ, ಕ್ರೀಡಾಪಟು ಶಿವಾಜಿ ಅವರು, ಉತ್ತರ ಕನ್ನಡ ಜಿಲ್ಲೆಯ ಮಕ್ಕಳಿಗೆ ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಪ್ರತಿಭೆ ಇದ್ದು, ಅವರಿಗೆ ಅಭ್ಯಾಸ ಮಾಡಲು ಕಾರವಾರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗತ್ಯ ಸುಸಜ್ಜಿತ ಸೌಲಭ್ಯಗಳನ್ನು ಒದಗಿಸಬೇಕು. ಸತತ ಪ್ರಯತ್ನ, ಕಠಿಣ ಪರಿಶ್ರಮ ಮತ್ತು ತಾಳ್ಮೆಯಿಂದ ಸಾಧನೆಗಳನ್ನು ಮಾಡಲು ಸಾಧ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಕಾಮನ್ ವೆಲ್ತ್, ಏಷ್ಯನ್ ಗೇಮ್ಸ್ ಮತ್ತು ಒಲಂಪಿಕ್ಸ್ ನಲ್ಲಿ ಪದಕ ಪಡೆಯುವ ಗುರಿಯನ್ನು ಹೊಂದಿದ್ದು, ಜಿಲ್ಲೆಗೆ ಮತ್ತು ದೇಶಕ್ಕಾಗಿ ಇನ್ನೂ ಉತ್ತಮ ಸಾಧನೆ ಮಾಡುತ್ತೇನೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ ಇದ್ದರು.

ಪ್ರಸಕ್ತ ಸಾಲಿನ ಬೆಳೆ ಸ್ಪರ್ಧೆ ಯೋಜನೆಯಡಿಯಲ್ಲಿ ಭತ್ತದ ಬೆಳೆಯಲ್ಲಿ ಅಧಿಕ ಇಳುವರಿ ಪಡೆಯುವ ರೈತರಿಂದ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಸ್ವತಃ ಬೇಸಾಯದಲ್ಲಿ ತೊಡಗಿರುವ ಕ್ರಿಯಾಶೀಲ ಕೃಷಿಕರಾಗಿರಬೇಕು. ಸ್ವಂತ ಜಮೀನು ಹೊಂದಿರದಿದ್ದರೂ ಬೇಸಾಯದಲ್ಲಿ (ಭೂ ಸುಧಾರಣೆಯ ಕಾಯ್ದೆ ನಿಯಮಗಳಿಗೆ ಒಳಪಟ್ಟು) ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೊತ್ಸಾಹಿಸುವ ಮತ್ತು ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಜಮೀನಿನ ಕನಿಷ್ಠ ವಿಸ್ತೀರ್ಣ 1 ಎಕರೆ ಇರಬೇಕು. ರೈತರು ಪಹಣಿ ಪತ್ರ, ಅಧಾರಕಾರ್ಡ್, ಬ್ಯಾಂಕ್ ಪಾಸ್ಸ್‍ಬುಕ್ ಝೇರಾಕ್ಸ್ ಪ್ರತಿ, ರೈತರ ಭಾವಚಿತ್ರ ಹಾಗೂ ಪ.ಜಾ/ಪ.ಪಂ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಆಸಕ್ತ ರೈತರು ಕ್ಷೇತ್ರ ಚಿತ್ರಗಳ ಸಹಿತ ಆ.31 ರೊಳಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೂತನ ಆವಿಷ್ಕಾರದೊಂದಿಗೆ ತಾಲೂಕಿನ ರೈತರು ಬೆಳೆದ ಬೆಳೆ, ಕೃಷಿ ಆಧಾರಿತ ಚಟುವಟಿಕೆಗಳನ್ನು ಪ್ರತಿಬಿಂಬಿಸುವಂತಹ ಚಟುವಟಿಕೆಗಳಿಗೆ ಸೂಕ್ತ ಪ್ರೋತ್ಸಾಹ ನೀಡಲು ಕೃಷಿ ಇಲಾಖೆ ಪ್ರಸಕ್ತ ಸಾಲಿನ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಐದು ರೈತರಿಗೆ ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಈ ಪ್ರಶಸ್ತಿಗೆ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ. ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ. ಹೈಟೆಕ್ ತಂತ್ರಜ್ಞಾನ ಅಳವಡಿಕೆ (ಹಸಿರುಮನೆ, ಕಸಿ ಅಭಿವೃದ್ಧಿ, ಸಸ್ಯಕಾಶಿ ಇತ್ಯಾದಿ) ಸಂಸ್ಕರಣೆ, ಅರಣ್ಯ ಕೃಷಿ ಇತ್ಯಾಧಿ ಚಟವಟಿಕೆಗಳಲ್ಲಿ ವಿಶೇಷ ಸಾಧನೆಗೈದ ರೈತರು ಅರ್ಜಿ ಸಲ್ಲಿಬಹುದಾಗಿದೆ.

ಕೈಗೊಂಡ ಚಟುವಟಿಕೆ ತಾಂತ್ರಿಕತೆಯು ಪ್ರಸ್ತುತ ಸನ್ನಿವೇಶಕ್ಕೆ ಮತ್ತು ರೈತ ಸಮುದಾಯಕ್ಕೆ ಪ್ರೇರಣೆ ಮತ್ತು ಅಳವಡಿಕೆಗೆ ಸಹಕಾರಿಯಾಗುವಂತಿರಬೇಕು. ಈಗಾಗಲೇ ಈ ಸಾಧನೆಗೆ ಪುರಸ್ಕøತರಾದವರು ಅಂದರೆ ಇದೇ ತರನಾದ/ ಸಮಾನಾಂತರವಾದ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ ಅಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ಆಸಕ್ತ ರೈತರು ಆ.31 ರೊಳಗಾಗಿ ರೈತರು ಪಹಣಿ ಪತ್ರ, ಅಧಾರಕಾರ್ಡ್, ಬ್ಯಾಂಕ್ ಪಾಸ್ಸ್‍ಬುಕ್ ಝೇರಾಕ್ಸ್ ಪ್ರತಿ, ಎರಡು ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರ, ಆತ್ಮ ಸಿಬ್ಬಂದಿ ಅಥವಾ ಇಲಾಖೆ ಕಚೇರಿಗೆ ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

===================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading