ಅಪ್ರಾಪ್ತ ಬಾಲಕನಿಗೆ ಬೈಕ್ ಚಲಾಯಿಸಲು ಅವಕಾಶ ನೀಡಿದ ಬೈಕ್ ಮಾಲೀಕರು 25 ಸಾವಿರ ರೂ ದಂಡ ತೆತ್ತಿದ್ದಾರೆ.

ಯಲ್ಲಾಪುರ ಪಟ್ಟಣದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಪ್ರಾಪ್ತ ಬಾಲಕ ಬೈಕ್ ಚಲಾಯಿಸುವುದನ್ನು ಕಂಡು ತಡೆದು ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯಿಂದ ಪ್ರವಾಸಕ್ಕೆಂದು ಯಲ್ಲಾಪುರಕ್ಕೆ ಬಂದಿದ್ದ ಸಂದರ್ಭದಲ್ಲಿ ಬಾಲಕನು ಬೈಕ್ ಚಲಾಯಿಸುತ್ತಿದ್ದನು.

ಪಿಎಸ್ಸೈ ಸಿದ್ದಪ್ಪ ಗುಡಿ ಈ ಪ್ರಕರಣವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ಅಪ್ರಾಪ್ತ ಬಾಲಕನಿಗೆ ಬೈಕ್ ಚಲಾಯಿಸಲು ನೀಡಿದ್ದ ಬೈಕ್ ಮಾಲೀಕರಾದ ಹುಬ್ಬಳ್ಳಿಯ ಅರವಿಂದ ದತ್ತಾತ್ರೇಯ ಪವಾರ್ ಅವರಿಗೆ 25 ಸಾವಿರ ರೂ ದಂಡ ವಿಧಿಸಿದೆ.

ಯಾವುದೇ ಕಾರಣಕ್ಕೂ ಅಪ್ರಾಪ್ತರಿಗೆ ವಾಹನ ಚಲಾಯಿಸಲು ನೀಡಬಾರದು, ಮೋಟಾರು ವಾಹನ ಕಾಯ್ದೆ ಮತ್ತು ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

=====================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading