



ಪಡಿತರ ಅಕ್ಕಿ ಮಾರಾಟ ಮತ್ತು ಖರೀದಿ ಮಾಡಿದರೆ ಕ್ರಮ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆಯ 15,819 ಹಾಗೂ ಅಧ್ಯತಾ ಪಡಿತರ ಚೀಟಿ 2,88,920 ಒಟ್ಟು 304739 ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ 2013 ರ ಪ್ರಕಾರ ಅಂತ್ಯೋದಯ ಕಾರ್ಡ ದಾರರಿಗೆ 35 ಕೆಜಿ ಅಕ್ಕಿ, ಅಧ್ಯತಾ ಪಡಿತರ ಚೀಟಿಗೆ ಪ್ರತಿ ಯೂನಿಟ್ 5 ಕೆಜಿ ಅಕ್ಕಿ ಜೊತೆಗೆ ಅನ್ನಭಾಗ್ಯ ಗ್ಯಾರಂಟಿ ಯೋಜನೆ ಅಡಿಯಲ್ಲಿ ಹೆಚ್ಚುವಾರಿಯಾಗಿ ಪ್ರತಿ ಯೂನಿಟ್ ಗೆ 5 ಕೆಜಿ ಅಕ್ಕಿ ನೀಡಲಾಗುತ್ತಿದು, ಪಡಿತರ ಚೀಟಿದಾರರು ಸದರಿ ಪಡಿತರ ಅಕ್ಕಿಯನ್ನು ಸ್ವಂತಕ್ಕೆ ಉಪಯೋಗ ಮಾಡಬೇಕು.
ಅದನ್ನು ಮಾರಾಟ ಮಾಡುವ ಹಾಗೆ ಇಲ್ಲಾ. ಒಂದು ವೇಳೆ ಮಾರಾಟ ಮಾಡಿದ್ದು ಕಂಡುಬಂದರೆ ಅಂತಹ ಪಡಿತರ ಚೀಟಿದಾರರ ಮೇಲೆ ಸರ್ಕಾರದ ನಿಯಮಾವಳಿಯಂತೆ ಕ್ರಮ ಕೈಕೊಳ್ಳಲಾಗುತ್ತದೆ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ತಪಾಸಣೆ ಮಾಡುವಾಗ ಅನಧಿಕೃತವಾಗಿ ಪಡಿತರ ಅಕ್ಕಿ ಸಂಗ್ರಹಣೆ ಅಥವಾ ಮಾಗಾರ್ಂತರ ಮಾಡಿದ್ದು ಕಂಡು ಬಂದರೆ ಅಥವಾ ಪಡಿತರ ಚೀಟಿದಾರರಿಂದ ಖರೀದಿ ಮಾಡಿದರೆ ಅವರ ಮೇಲೆ ಅವಶ್ಯ ವಸ್ತು ಕಾಯ್ದೆ 1955 ರಡಿಯಲ್ಲಿ ಪ್ರಕರಣ ದಾಖಲು ಮಾಡಲಾಗುವುದು
ಹೆಚ್ಚಿನ ಮಾಹಿತಿಗೆ ತಾಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಿರಸೇದಾರ/ಆಹಾರ ನಿರೀಕ್ಷಕರನ್ನು ಅಥವಾ ಉಪನಿರ್ದೇಶಕರು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕಾರವಾರ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಮೂಲಕ ಸಂಪರ್ಕಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರಿಗೆ ನೌಕಾಪಡೆಯಿಂದ ಸನ್ಮಾನ
ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಯನ್ನು ಗುರುತಿಸಿ, ಕಾರವಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಆಶಾ ಕಾರ್ಯಕರ್ತೆಯರನ್ನು ಕರ್ನಾಟಕ ನೌಕಾಪಡೆ ವತಿಯಿಂದ ಇತ್ತೀಚೆಗೆ ಗೌರವಿಸಿ ಸನ್ಮಾನಿಸಲಾಯಿತು.

ಕರ್ನಾಟಕ ನೌಕಾ ವಲಯದ ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಅವರ ಪರವಾಗಿ ಕಮಾಂಡರ್ ಕೆ. ಅನಂತರಾಜ್ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಮಾತನಾಡಿ, ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು. ಅವರ ಶ್ರಮದಿಂದಾಗಿ ನಮ್ಮ ವೈದ್ಯಕೀಯ ಶಿಬಿರಗಳು ಯಶಸ್ವಿಯಾಗಿ ಹೆಚ್ಚು ಜನರನ್ನು ತಲುಪಲು ಸಾಧ್ಯವಾಗಿದೆ ಎಂದು ಹೇಳಿದರು.
ಇತ್ತೀಚಿನ ತಿಂಗಳುಗಳಲ್ಲಿ ನೌಕಾಪಡೆ ಆಯೋಜಿಸಿದ್ದ ವೈದ್ಯಕೀಯ ಶಿಬಿರಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಾರ್ವಜನಿಕರಿಗೆ ಮಾಹಿತಿ ತಲುಪಿಸುವಲ್ಲಿ ಮತ್ತು ಜನರನ್ನು ಶಿಬಿರಕ್ಕೆ ಕರೆತರುವಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸಿದ್ದರು. ಆಶಾ ಕಾರ್ಯಕರ್ತೆಯರ ಶ್ರಮದಿಂದಾಗಿ ಸಾವಿರಾರು ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಯ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಯಿತು ಎಂದರು.
ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರ ಸೇವೆಯನ್ನು ಸ್ಮರಿಸಿ, ನೌಕಾಪಡೆಯ ವತಿಯಿಂದ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಕಾರವಾರ ವಲಯದ ಸಾರ್ವಜನಿಕರು ಮತ್ತು ಸ್ಥಳೀಯ ಸಮುದಾಯದ ಕ್ಷೇಮಾಭಿವೃದ್ಧಿಗೆ ಭಾರತೀಯ ನೌಕಾಪಡೆ ಬದ್ಧವಾಗಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಯಿತು.

======================













