ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ವಿಪ್ರ ಸ್ವ-ಉದ್ಯಮ ನೇರ ಸಾಲ ಯೊಜನೆಯ ಮೂಲಕ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೊಟೇಲ್ ಉದ್ಯಮ (ಕ್ಯಾಟರಿಂಗ್), ಅಂಗಡಿ, ಟೈಲರಿಂಗ್, ಟ್ಯಾಕ್ಸಿ, ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಒದಗಿಸುವ ಸಲುವಾಗಿ ನೇರ ಸಾಲ ಯೋಜನೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಸಂಬಂಧಪಟ್ಟ ಹಿಂದುಳಿದ ಬ್ರಾಹ್ಮಣ ಸಮುದಾಯವರು ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಲಾಗಿದೆ.

ಮಹಿಳೆಯರಿಗೆ 33% ಹಾಗೂ ದಿವ್ಯಾಂಗರಿಗೆ ಶೇ. 5% ಮೀಸಲಾತಿಯನ್ನು ನೀಡಲಾಗುವುದು. ಅರ್ಜಿಯನ್ನು ಆ.31 ಸಂಜೆ 5.30 ಗಂಟೆಯೊಳಗಾಗಿ website : www.ksbdb.karnataka.gov.in ನಲ್ಲಿ  ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ನ್ಯೂ ಕೆ.ಎಚ್.ಬಿ. ಕಾಲೋನಿ. ಹಬ್ಬುವಾಡಾ, ಕಾರವಾರ ಅಥವಾ ದೂರವಾಣಿ ಸಂಖ್ಯೆ :7975633671 ನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

==============

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading