ವಸತಿ ರಹಿತ ಬಡ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸುವ ಮಹತ್ವಾಕಾಂಕ್ಷೆಯ ಉದ್ದೇಶದೊಂದಿಗೆ ಯಲ್ಲಾಪುರ ಪಟ್ಟಣದ ಹೆಬ್ಬಾರ್ ನಗರದಲ್ಲಿ ನಿರ್ಮಿಸಲಾಗಿರುವ ಜಿ+2 ಮಾದರಿಯ ಮನೆಗಳ ಮೊದಲ ಹಂತದ ಹಂಚಿಕೆ ಕಾರ್ಯಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಅವರು ಸೋಮವಾರ ಚಾಲನೆ ನೀಡಿದರು.
ಪಟ್ಟಣದ ಹೆಬ್ಬಾರ್ ನಗರದ ಕಾರ್ಮಿಕ ಭವನದಲ್ಲಿ ಆಯೋಜಿಸಲಾದ ಮನೆಗಳ ಹಂಚಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಶಿವರಾಮ ಹೆಬ್ಬಾರ್ ಅರ್ಹ ಫಲಾನುಭವಿಗಳಿಗೆ ಮನೆಗಳ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿ, ಪ್ರತಿಯೊಬ್ಬರಿಗೂ ಸುರಕ್ಷಿತ ಹಾಗೂ ಗೌರವಯುತ ವಸತಿ ಸೌಲಭ್ಯ ಒದಗಿಸುವುದು ತಮ್ಮ ಸಂಕಲ್ಪವಾಗಿದ್ದು, ಬಡವರ ಬದುಕಿನಲ್ಲಿ ನೆಮ್ಮದಿ ಮತ್ತು ಭದ್ರತೆಯನ್ನು ಮೂಡಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ ಹೆಜ್ಜೆಯಾಗಿದೆ ಎಂದರು.
ಹೆಬ್ಬಾರ್ ನಗರದಲ್ಲಿ ನಿರ್ಮಾಣಗೊಂಡಿರುವ ಜಿ+2 ಮಾದರಿಯ ಮನೆಗಳು ಆಧುನಿಕ ಸೌಲಭ್ಯಗಳನ್ನು ಒಳಗೊಂಡಿದ್ದು, ಅರ್ಹ ಫಲಾನುಭವಿಗಳ ಜೀವನದಲ್ಲಿ ಹೊಸ ಆಶಾಕಿರಣ ಮೂಡಿಸಲಿವೆ. ಸರ್ಕಾರದ ವಿವಿಧ ವಸತಿ ಯೋಜನೆಗಳ ಸದುಪಯೋಗವನ್ನು ಜನರಿಗೆ ತಲುಪಿಸುವ ಮೂಲಕ ಪ್ರತಿಯೊಬ್ಬ ಕುಟುಂಬಕ್ಕೂ ಸ್ವಂತ ಸೂರು ಕಲ್ಪಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
ಖಾಸಗಿ ಕಂಪನಿಯಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ ಉದ್ಯೋಗದ ಸ್ಥಳ : ಕಾರವಾರ, ಕುಮಟಾ, ಹಳಿಯಾಳ, ದಾಂಡೇಲಿ, ಮುಂಡಗೋಡ, ಕುಂದಾಪುರ, ಉಡುಪಿ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ರೆಸ್ಯೂಮ್… Read more: ಉದ್ಯೋಗ ವಾರ್ತೆ
ಹೆದ್ದಾರಿ ತಡೆ ಪ್ರತಿಭಟನೆಯ ಸಮಗ್ರ ವರದಿ ಓದಿ: ಹೆದ್ದಾರಿ ತಡೆ ಪ್ರತಿಭಟನೆಗೆ ಸಂಬಂಧಿಸಿ ಇ-ಯಲ್ಲಾಪುರ ಡಿಜಿಟಲ್ ನ್ಯೂಸ್ ಮಾಧ್ಯಮದಲ್ಲಿ ಪ್ರಕಟವಾದ ಎಲ್ಲಾ ವರದಿಗಳು ಇಲ್ಲಿವೆ. ನದಿ ತಿರುವು… Read more: ಹೆದ್ದಾರಿ ತಡೆ ಪ್ರತಿಭಟನೆಯ ಸಮಗ್ರ ವರದಿ
ನದಿ ತಿರುವು ಯೋಜನೆ ಮೂರ್ಖತನದ ನಿರ್ಣಯ ಅವರು ಮಂಗಳವಾರ ಯಲ್ಲಾಪುರದಲ್ಲಿ ನಡೆದ ನದಿ ತಿರುವು ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿ, ಬೇಡ್ತಿ ನದಿಯಲ್ಲಿ ನೀರಿನ ಪ್ರಮಾಣ… Read more: ನದಿ ತಿರುವು ಯೋಜನೆ ಮೂರ್ಖತನದ ನಿರ್ಣಯ
ನದಿ ತಿರುವು ಯೋಜನೆ ವಿರೋಧಿಸಿ ಪ್ರತಿಭಟನೆ ಆರಂಭ ನದಿ ತಿರುವು ಯೋಜನೆಯನ್ನು ವಿರೋಧಿಸಿ ಮಂಗಳವಾರ ಬೆಳಿಗ್ಗೆ ಯಲ್ಲಾಪುರದಲ್ಲಿ ಪ್ರತಿಭಟನೆ ಆರಂಭವಾಗಿದೆ. ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ಪಟ್ಟಣದ… Read more: ನದಿ ತಿರುವು ಯೋಜನೆ ವಿರೋಧಿಸಿ ಪ್ರತಿಭಟನೆ ಆರಂಭ
ಹೆದ್ದಾರಿ ತಡೆ ಪ್ರತಿಭಟನೆಗೆ ಸಂಪೂರ್ಣ ಸಿದ್ಧತೆ ಮಂಗಳವಾರ ಬೆಳಿಗ್ಗೆ 9.30 ಗಂಟೆಗೆ ಬಸ್ ನಿಲ್ದಾಣ ಸಮೀಪದ ಟಿ.ಎಂ.ಎಸ್.ಸೂಪರ್ ಮಾರ್ಟ್ ಹತ್ತಿರ ಸಭೆ ಸೇರುವುದೆಂದು ತಿಳಿಸಲಾಗಿದೆ. ಪರಿಸರತಜ್ಞರುಇಲ್ಲಿ ಜನರನ್ನು… Read more: ಹೆದ್ದಾರಿ ತಡೆ ಪ್ರತಿಭಟನೆಗೆ ಸಂಪೂರ್ಣ ಸಿದ್ಧತೆ
ಹೆದ್ದಾರಿ ತಡೆ ಪ್ರತಿಭಟನೆಗೆ ಸಕಲ ಸಿದ್ಧತೆ ಅವರು ಸಮೀತಿಯ ಪ್ರಮುಖರೊಂದಿಗೆ ರವಿವಾರ ಯಲ್ಲಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಹಲವು ಹಂತಗಳಲ್ಲಿ ನದಿ ತಿರುವು ಯೋಜನೆ ವಿರುದ್ಧ ಪ್ರತಿಭಟನೆ… Read more: ಹೆದ್ದಾರಿ ತಡೆ ಪ್ರತಿಭಟನೆಗೆ ಸಕಲ ಸಿದ್ಧತೆ