ಜಾತ್ರೆಗೆ ಹೋಗಿ ವಾಪಸ್ ಬರುತ್ತಿದ್ದಾಗ ಮಹಿಳೆಯ ಕುತ್ತಿಗೆಯಲ್ಲಿದ್ದ ಬಂಗಾರದ ಮಂಗಳಸೂತ್ರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ಫೆ. 9ರಂದು ರಾತ್ರಿ ಹಳಿಯಾಳ ತಾಲೂಕಿನ ಮುರ್ಕವಾಡ ಜಾತ್ರೆಗೆ ಕುಟುಂಬದವರೊಂದಿಗೆ ತೆರಳಿ, ವಾಪಸ್ ಬರುತ್ತಿದ್ದಾಗ ಮಹಿಳೆಯ ಕೊರಳಲ್ಲಿದ್ದ ಸುಮಾರು 30 ಗ್ರಾಂ ತೂಕದ ಮಂಗಳಸೂತ್ರವನ್ನು ಕಿತ್ತುಕೊಂಡು ವ್ಯಕ್ತಿಯೊಬ್ಬ ಪರಾರಿಯಾಗಿದ್ದ. ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಹಳಿಯಾಳ ಪೊಲೀಸರು, ಖಚಿತ ಮಾಹಿತಿಯ ಮೇರೆಗೆ ಆರೋಪಿಗಳಾದ ಹೊಸ ಹಡಗಲಿಯ ಶಶಿಧರ ಉಳವಪ್ಪ ಬಾರ್ಕಿ, ಕೆ.ಕೆ.ಹಳ್ಳಿಯ ಕಿರಣ ಧರ್ಮರಾಜ್ ಗೋಡಿಮನಿ, ಮಡ್ಡಿಯ ವಾಸಿಮ್ ಶಿರಾಜುದ್ದೀನ್ ಚಹ್ವಾಣ ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಮಹಿಳೆಯ ಮಂಗಳಸೂತ್ರ ಕಿತ್ತುಕೊಂಡು ಪರಾರಿಯಾಗಿರುವುದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಆರೋಪಿಗಳಿಂದ ಸುಮಾರು 4.50 ಲಕ್ಷ ರೂ ಮೌಲ್ಯದ 30 ಗ್ರಾಂ ಬಂಗಾರದ ಮಂಗಳಸೂತ್ರ ಹಾಗೂ ಕೃತ್ಯಕ್ಕೆ ಬಳಸಿದ್ದ 50 ಸಾವಿರ ಮೌಲ್ಯದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

======================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading