80 ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಭಾರತೀಯ ಜನತಾ ಪಕ್ಷದ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನವನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಹೇಳಿದರು.

ಅವರು ಮಂಗಳವಾರ ಯಲ್ಲಾಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ರಾಷ್ಟ್ರಪ್ರೇಮವನ್ನು ಉದ್ದೀಪಿಸಲು ಮತ್ತು ರಾಷ್ಟ್ರಧ್ವಜದ ಮಹತ್ವವನ್ನು ತಿಳಿಸಿಕೊಡುವ ಉದ್ದೇಶದಿಂದ ಹರ್ ಘರ್ ತಿರಂಗಾ ಅಭಿಯಾನ ನಡೆಯುತ್ತಿದೆ. ಅಭಿಯಾನದ ಅಂಗವಾಗಿ ಬುಧವಾರ ಮಧ್ಯಾಹ್ನ ಕಿರವತ್ತಿಯಲ್ಲಿ ಬೈಕ್ ರ‍್ಯಾಲಿ ಮತ್ತು ಗುರುವಾರ ಉಮ್ಮಚಗಿಯಲ್ಲಿ ಬೈಕ್ ರ‍್ಯಾಲಿ ನಡೆಯಲಿದೆ. ರಾಷ್ಟ್ರಭಕ್ತಿ ಜಾಗೃತಿಗೊಳಿಸುವ ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದರು.

ಇದೇ ಸಂದರ್ಭದಲ್ಲಿ ಯಲ್ಲಾಪುರದ ಪತ್ರಕರ್ತರಿಗೆ ರಾಷ್ಟ್ರಧ್ವಜವನ್ನು ವಿತರಿಸಲಾಯಿತು.

ಅ.14ರಂದು ಮಧ್ಯಾಹ್ನ 3 ಗಂಟೆಗೆ ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಂದ ರಾಷ್ಟ್ರಭಕ್ತಿ ಜಾಗೃತಿ ಉಪನ್ಯಾಸ ನಡೆಯಲಿದೆ. ಇದು ಸಾರ್ವಜನಿಕ ಕಾರ್ಯಕ್ರಮವಾಗಿದ್ದು ಜಿಲ್ಲೆಯ ವಿವಿಧೆಡೆಯಿಂದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದರು. ಅ.14 ರಂದು ಸಂಜೆ 7 ಗಂಟೆಗೆ ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆಯಲಿದೆ. ಅಂಬೇಡ್ಕರ್ ವೃತ್ತದಿಂದ ಗ್ರಾಮದೇವಿ ದೇವಾಲಯದ ವರೆಗೆ ಪಂಜಿನ ಮೆರವಣಿಗೆ ನಡೆಯಲಿದೆ ಎಂದರು.

ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ, ಉಪಾಧ್ಯಕ್ಷ ಸುಬ್ಬಣ್ಣ ಬೋಳ್ಮನೆ, ಕಾರ್ಯದರ್ಶಿ ರವಿ ಕೈಟಕರ್, ನಗರ ಘಟಕದ ಅಧ್ಯಕ್ಷ ಸೋಮೇಶ್ವರ ನಾಯ್ಕ ಹಾಗೂ ಪಕ್ಷದ ಪ್ರದೀಪ ಯಲ್ಲಾಪುರಕರ್, ರಾಧಾ ಗುಡಿಗಾರ್, ಸುನೀತಾ ವರ್ಣೇಕರ್, ಸಾಕ್ಷಿ ಮುರಕುಂಬಿ ಮುಂತಾದವರು ಇದ್ದರು.

====================

Leave a Reply

You cannot copy content of this page