ಯಲ್ಲಾಪುರ ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಶನಿವಾರ ಬೆಳಿಗ್ಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಸಡಗರ, ಸಂಭ್ರಮದಿಂದ ನಡೆಯಿತು.

ತಹಶೀಲ್ದಾರ ಎಂ.ಆರ್.ಕುಲಕರ್ಣಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ದೇಶದ ಸಮಗ್ರತೆ, ಐಕ್ಯತೆಗೆ ಶ್ರಮಿಸಬೇಕು, ಎಲ್ಲರೂ ಒಗ್ಗಟ್ಟಾಗಿ ದೇಶ ಕಟ್ಟೋಣ ಎಂದರು.

ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನೇಕ ಮಹನೀಯರ ಹೋರಾಟದ ಫಲವಾಗಿ ದೊರೆತ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು, ದೇಶದ ಪ್ರಗತಿಗೆ ಕೈಜೋಡಿಸೋಣ ಎಂದರು.

ವೇದಿಕೆಯಲ್ಲಿ ತಾ.ಪಂ.ಮುಖ್ಯ ಕಾರ್ಯನಿರ್ವಾಹಕ ರಾಜೇಶ ಧನವಾಡಕರ್, ಪ.ಪಂ.ಮುಖ್ಯಾಧಿಕಾರಿ ಕೇಶವ ಚೌಗಲೆ, ತಾ.ಸ.ನೌ.ಸಂಘದ ಅಧ್ಯಕ್ಷ ಸಂಜೀವಕುಮಾರ್ ಹೊಸ್ಕೇರಿ, ಗ್ಯಾರಂಟಿ ಸಮಿತಿ ತಾಲೂಕಾ ಅಧ್ಯಕ್ಷ ಉಲ್ಲಾಸ ಶಾನಭಾಗ ಮುಂತಾದವರು ಇದ್ದರು. ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಪೌರಕಾರ್ಮಿಕರಿಗೆ ಉಚಿತವಾಗಿ ನೀಡಲಾದ ಮನೆಯ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು.

ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಬಿಇಒ ರೇಖಾ ನಾಯ್ಕ ಸ್ವಾಗತಿಸಿದರು. ಪ್ರಕಾಶ ತಾರಿಕೊಪ್ಪ ವಂದಿಸಿದರು. ಸುಧಾಕರ ನಾಯ್ಕ ನಿರ್ವಹಿಸಿದರು.

ಯಲ್ಲಾಪುರ ಪಟ್ಟಣದ ವಲೀಷಾಗಲ್ಲಿಯ ಕೆಜಿಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಶಾಲಾ ಅಭಿವೃದ್ಧಿ ಸಮೀತಿಯ ಅಧ್ಯಕ್ಷ ಕೈಸರ್ ಸೈಯದ್ ಅಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮಕ್ಕಳು ಉಜ್ವಲ ಭವಿಷ್ಯಕ್ಕಾಗಿ ಶಾಲಾ ಶಿಕ್ಷಣದ ಜೊತೆಯಲ್ಲಿ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದರು. ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.

====================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading