








ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಸಾವು

ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಬೈಕ್ ಚಲಾಯಿಸಿಕೊಂಡುಹೋಗುತ್ತಿರುವಾಗ, ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.

ಘಟನೆಯ ವಿವರ
ಅ.13ರಂದು ಬೆಳಿಗ್ಗೆ 9 ಗಂಟೆಗೆ ಯಲ್ಲಾಪುರ ತಾಲೂಕಿನ ಉಮ್ಮಚಗಿ ಸಮೀಪದ ಹುಣಸೆಮನೆಯ 51 ವರ್ಷದ ಸೋಮಾ ಸುಬ್ಬಾ ಸಿದ್ದಿ ಎಂಬಾತ ತನ್ನ ಬೈಕ್ ಅನ್ನು ಹಲಸಿನಕೊಪ್ಪ ಕಡೆಯಿಂದ ಕನೇನಳ್ಳಿ ಕಡೆಗೆ


ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡುಹೋಗುತ್ತಿರುವಾಗ ಬೈಕ್ ಸ್ಕಿಡ್ ಆಗಿ ಕೆಳಗೆಬಿದ್ದು, ಗಂಭೀರವಾಗಿ ಗಾಯಗೊಂಡಿದ್ದನು. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಅ.14 ರಂದು ಮಧ್ಯರಾತ್ರಿ 12.20ಕ್ಕೆ ಮೃತಪಟ್ಟಿದ್ದಾನೆ. ಈ ಕುರಿತು ಹುಲ್ಲರಮನೆಯ ಗೋವಿಂದ ಸಿದ್ದಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

====================















