ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ಯಲ್ಲಾಪುರ ಮತ್ತು ಮುಂಡಗೋಡು ವ್ಯಾಪ್ತಿಯ ಒಕ್ಕೂಟಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯು ಪಟ್ಟಣದ ವೆಂಕಟ್ರಮಣ ಮಠದ ಸಭಾಭವನದಲ್ಲಿ ನಡೆಯಿತು.

ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಜನರಲ್ಲಿ ಉಳಿತಾಯದ ಮನೋಭಾವ, ಆರ್ಥಿಕ ಶಿಸ್ತು, ಸ್ವಾವಲಂಬನೆ ಹಾಗೂ ಉದ್ಯಮಶೀಲತೆಯನ್ನು ಬೆಳೆಸಲಾಗುತ್ತಿದೆ. ಸ್ವಸಹಾಯ ಸಂಘಗಳ ಮೂಲಕ ಸಾವಿರಾರು ಕುಟುಂಬಗಳು ಸಂಘಟಿತರಾಗಿ ತಮ್ಮ ಬದುಕನ್ನು ತಾವೇ ಕಟ್ಟಿಕೊಳ್ಳುವ ಶಕ್ತಿ ಪಡೆದಿವೆ. ದಾನವೆಂದರೆ ಕೇವಲ ಹಣ ನೀಡುವುದಲ್ಲ, ಒಬ್ಬ ವ್ಯಕ್ತಿ ತನ್ನ ಕಾಲಿನ ಮೇಲೆ ನಿಲ್ಲುವಂತೆ ಮಾಡುವುದು ಕೂಡ ಮಹಾದಾನ ಎಂದರು.

ಯೋಜನೆಯ ಶಿರಸಿ ಜಿಲ್ಲಾ ನಿರ್ದೇಶಕ ದಿನೇಶ್ ಎಂ. ಮಾತನಾಡಿ, ಯಲ್ಲಾಪುರ ಮತ್ತು ಮುಂಡಗೋಡು ವ್ಯಾಪ್ತಿಯಲ್ಲಿ 2,359 ಪ್ರಗತಿ ಬಂಧು ಸ್ವಸಹಾಯ ಸಂಘಗಳಿದ್ದು, ಒಟ್ಟು 21,231 ಸದಸ್ಯರು ಇದ್ದಾರೆ. ಸಂಘಗಳ ಮೂಲಕ ಸುಮಾರು 10 ಕೋಟಿ ರೂ ಉಳಿತಾಯ ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಯಲ್ಲಾಪುರ ಮತ್ತು ಮುಂಡಗೋಡ ವ್ಯಾಪ್ತಿಯ ಎಲ್ಲಾ ಒಕ್ಕೂಟಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು. ತಾಲೂಕಿನ ಯೋಜನಾಧಿಕಾರಿ ಸಂತೋಷ್ ಎ.ಎಸ್. ಸ್ವಾಗತಿಸಿದರು. ಸೇವಾ ಪ್ರತಿನಿಧಿ ರಾಜೀವಿ ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕ ಮಂತಯ್ಯ ವಂದಿಸಿದರು.

==================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading