ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ಸುಜ್ಞಾನ ಸೇವಾ ಸಂಸ್ಥೆ (ರಿ) ಉತ್ತರಕನ್ನಡ, ಇ-ಯಲ್ಲಾಪುರ ಡಿಜಿಟಲ್ ನ್ಯೂಸ್, ಸುಜ್ಞಾನ ವಾಹಿನಿ ಪತ್ರಿಕೆ ವತಿಯಿಂದ, ಹ್ಯಾಂಗ್ಯೋ ಐಸ್ ಕ್ರೀಂ, ಗೌತಮ್ ಜುವೆಲ್ಲರ್ಸ್ ಯಲ್ಲಾಪುರ ಪ್ರಾಯೋಜಕತ್ವದಲ್ಲಿ ಆರನೇ ವರ್ಷದ ಉತ್ತರಕನ್ನಡ ಜಿಲ್ಲಾ ಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ರಂಗಸಹ್ಯಾದ್ರಿ ಹಾಗೂ ಜ್ಞಾನೇಶ್ವರಿ ಮಹಿಳಾ ಮಂಡಳಿ ಇವರ ಸಹಯೋಗದಲ್ಲಿ ಈ ಸ್ಪರ್ಧೆ ನಡೆಯಲಿದೆ.

ತೀರ್ಪುಗಾರರಿಂದ ಆಯ್ಕೆಗೊಂಡ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ಫೋಟೋಗಳಿಗೆ ನಗದು ಬಹುಮಾನ, ಬೆಳ್ಳಿಯ ಸ್ಮರಣಿಕೆ, ಪಾರಿತೋಷಕ, ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಗುವುದು. 9 ಫೋಟೋಗಳಿಗೆ ಸಮಾಧಾನಕರ ಬಹುಮಾನವಾಗಿ ಬೆಳ್ಳಿಯ ಸ್ಮರಣಿಕೆ, ಪಾರಿತೋಷಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಗುವುದು ಎಂದು ಸುಜ್ಞಾನ ಸೇವಾ ಸಂಸ್ಥೆ ಉತ್ತರಕನ್ನಡ (ರಿ) ಅಧ್ಯಕ್ಷರಾದ ಜಿ.ಎನ್.ಭಟ್ ತಟ್ಟಿಗದ್ದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಪರ್ಧೆಗೆ ಪ್ರವೇಶ ಸಂಪೂರ್ಣ ಉಚಿತವಾಗಿರುತ್ತದೆ. ಲೈಕ್ ಮಾಡಿ, ಶೇರ್ ಮಾಡಿ ಎಂಬ ಯಾವುದೇ ಕಿರಿಕಿರಿ ಇಲ್ಲ,

======================

One thought on “ಉತ್ತರಕನ್ನಡ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆ ಆಯೋಜನೆ”

Leave a Reply

You cannot copy content of this page