ಚಾಲಕನ ನಿಯಂತ್ರಣ ತಪ್ಪಿದ ಮೆಥನಾಲ್ ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್ ಹೆದ್ದಾರಿ ಪಕ್ಕದ ಪಲ್ಟಿಯಾದ ಘಟನೆ ತಾಲೂಕಿನ ಇಡಗುಂದಿ ಶಾಲೆಯ ಸಮೀಪ ಹೆದ್ದಾರಿಯಲ್ಲಿ ನಡೆದಿದೆ.

ಟ್ಯಾಂಕರ್ ಹುಬ್ಬಳ್ಳಿಯಿಂದ ಅಂಕೋಲಾ ಕಡೆಗೆ ಹೋಗುತ್ತಿತ್ತು. ಕ್ರೇನ್ ಬಳಸಿ ಸುರಕ್ಷಿತವಾಗಿ ಟ್ಯಾಂಕರ್ ಅನ್ನು ಮೇಲೆತ್ತಲಾಯಿತು. ಪೊಲೀಸರು ಹಾಗೂ ಅಗ್ನಿಶಾಮಕ ಅಧಿಕಾರಿಗಳು, ಸಿಬ್ಬಂದಿಗಳು, ತಂತ್ರಜ್ಞರು ಸ್ಥಳದಲ್ಲಿ ಬೀಡುಬಿಟ್ಟಿದ್ದರು.

ಟ್ಯಾಂಕರ್ ಅನ್ನು ಸುರಕ್ಷಿತವಾಗಿ ಮೇಲೆತ್ತಿದ ನಂತರ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಟ್ಟರು.

==================

Leave a Reply

You cannot copy content of this page