ಕೃಷಿ ವಿಶ್ವವಿದ್ಯಾಲಯ, ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯಲ್ಲಿ ಖಾಲಿ ಇರುವ ಅರಣ್ಯ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕ 9, ಕೃಷಿ ಅರ್ಥಶಾಸ್ತ್ರ, ಕೃಷಿ ವಿಸ್ತರಣಾ ಶಿಕ್ಷಣ, ಕೃಷಿ ಸಂಖ್ಯಾಶಾಸ್ತ್ರ, ದೈಹಿಕ ಶಿಕ್ಷಣ, ಕನ್ನಡ (ಅರೆಕಾಲಿಕ) ಸಹಾಯಕ ಪ್ರಾಧ್ಯಾಪಕ ತಲಾ ಒಂದು ಹುದ್ದೆ ಸೇರಿದಂತೆ 14 ಹುದ್ದೆಗಳಿಗೆ ತಾತ್ಕಾಲಿಕವಾಗಿ 179 ದಿನಗಳ ಅವಧಿಗೆ ಗುತ್ತಿಗೆ/ಅರೆಕಾಲಿಕ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ವಿದ್ಯಾರ್ಹತೆ ಹಾಗೂ ಪ್ರವರ್ಗದ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಎರಡು ಪ್ರತಿಗಳಲ್ಲಿ ಎಂಸ್ ವರ್ಡ್ ನಮೂನೆಯಲ್ಲಿ ಟೈಪ್ ಮಾಡಿದ ವಿವರಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯದಂದು ಡೀನ್ (ಅರಣ್ಯ) ಅರಣ್ಯ ಮಹಾವಿದ್ಯಾಲಯ, ಶಿರಸಿರವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ. ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅವುಗಳ ಎರಡು ಸ್ವಯಂ ಧೃಡಿಕೃತ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಲು ತಿಳಿಸಲಾಗಿದೆ. ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು.

ಸಂದರ್ಶನದ ದಿನಾಂಕ, ವಿದ್ಯಾರ್ಹತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅರಣ್ಯ ಮಹಾವಿದ್ಯಾಲಯದ ಡೀನ್ ಅವರನ್ನು ಸಂಪರ್ಕಿಸುವಂತೆ ಶಿರಸಿ ಅರಣ್ಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

====================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading